ಬ್ರೇಕಿಂಗ್ ನ್ಯೂಸ್
24-03-24 10:17 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.24: ಬಿಜೆಪಿ ಐದನೇ ಪಟ್ಟಿಯಲ್ಲಿ 111 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸಿದೆ. ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಘೋಷಣೆ ಮಾಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನ ಬಾಕಿ ಉಳಿಸಿಕೊಂಡಿದೆ.
ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಅಲ್ಲಿನ ಟಿಕೆಟ್ ನೀಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಡಾ.ಕೆ ಸುಧಾಕರ್ ಗೆ ಟಿಕೆಟ್ ನೀಡಿದ್ದಾರೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಹಿಂದು ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಕ್ ನೀಡಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ.



ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಎರಡು ವಾರಗಳ ಹಿಂದೆಯೇ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು, ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿದೆ. ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಕಾರಜೋಳ ಹೆಸರನ್ನು ರಾಜ್ಯ ನಾಯಕರು ಶಿಫಾರಸು ಮಾಡಿದ್ದರು. ಆದರೆ ಈ ಹೆಸರನ್ನು ಅಂತಿಮಗೊಳಿಸಲು ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿಲ್ಲ.
ಉಳಿದಂತೆ ಐದನೇ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರನೌತ್, ಮೇನಕಾ ಗಾಂಧಿ ಸುಲ್ತಾನ್ ಪುರ, ರಾಮಾಯಣ ನಟ ಅರುಣ್ ಗೋವಿಲ್ ಮೀರತ್, ಜಿತಿನ್ ಪ್ರಸಾದ್ ಫಿಲಿಬಿತ್, ರವಿಶಂಕರ್ ಪ್ರಸಾದ್ ಪಾಟ್ನಾದಿಂದ ಟಿಕೆಟ್ ಗಿಟ್ಟಿಸಿದ್ದಾರೆ. ಮೇನಕಾ ಪುತ್ರ ಅರುಣ್ ಗಾಂಧಿಗೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಅರಣ್ ಟಿಕೆಟ್ ಸಿಗದೇ ಇದ್ದರೆ ಪಕ್ಷೇತರ ಸ್ಪರ್ಧೆಗೆ ಒಲವು ಹೊಂದಿದ್ದಾರೆ.
Anath Kumar Hegde mp ticket missed for uttar karnataka, Jagadish Shettar gets ticket from Belagavi.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am