ಬ್ರೇಕಿಂಗ್ ನ್ಯೂಸ್
27-03-24 05:03 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.27: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಯ್ಕೆ ವಿಚಾರದಲ್ಲಿ ಶಾಸಕರ ನಡುವಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯನಿಗೆ ಟಿಕೆಟ್ ನೀಡುವಂತೆ ಪಟ್ಟುಹಿಡಿದಿದ್ದಾರೆ. ರಮೇಶ್ ಕುಮಾರ್ ಬಣ ತಾವು ಬೆಂಬಲಿಸುವ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇದೇ ವೇಳೆ, ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ಆಗಿದೆ ಎಂಬ ಸುದ್ದಿ ತಿಳಿದ ಕೋಲಾರದ ಐವರು ಶಾಸಕರು ರಾಜಿನಾಮೆ ನೀಡುವುದಾಗಿ ಹೇಳಿ ಹೈಡ್ರಾಮಾ ನಡೆಸಿದ್ದಾರೆ. ಇದಲ್ಲದೆ, ಕೋಲಾರದ ರಾಜಕೀಯ ಬಿಕ್ಕಟ್ಟಿನಿಂದ ಬೇಸತ್ತ ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ರಾಜೀನಾಮೆ ನೀಡಲು ಮುಂದಾಗಿರುವುದು ಕಾಂಗ್ರೆಸ್ಗೆ ಶಾಕ್ ನೀಡಿದೆ.
ಮುನಿಯಪ್ಪ ಅಳಿಯನಿಗೆ ಟಿಕೆಟ್ ನೀಡುವುದನ್ನು ಖಂಡಿಸಿ ಕೋಲಾರ ಭಾಗದ ನಾಲ್ವರು ಶಾಸಕರು ಮತ್ತು ಸಚಿವ ಎಂಸಿ ಸುಧಾಕರ್ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರಂತೆ. ವಿಧಾನ ಪರಿಷತ್ ಸದಸ್ಯರಾದ ನಜೀರ್ ಅಹ್ಮದ್ ಹಾಗೂ ಅನಿಲ್ ಕುಮಾರ್ ರಾಜೀನಾಮೆ ಪತ್ರವನ್ನು ಬರೆದು ಅದನ್ನು ಮಾಧ್ಯಮಕ್ಕೆ ತೋರಿಸಿದ್ದು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜಿನಾಮೆ ನೀಡುತ್ತೇವೆಂದು ಹೇಳುತ್ತಿರುವಾಗಲೇ ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ವಿಧಾನಸೌಧಕ್ಕೆ ಆಗಮಿಸಿ, ಶಾಸಕರ ಮನವೊಲಿಕೆಗೆ ಮುಂದಾದರು.
ಲೋಕಸಭೆ ಟಿಕೆಟ್ ಬಗ್ಗೆ ಇಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಶಾಸಕರೊಂದಿಗೆ ಚರ್ಚಿಸಲಿದ್ದು ಅಲ್ಲಿ ಚರ್ಚೆ ಮಾಡೋಣ. ಈಗ ರಾಜೀನಾಮೆ ಕೊಡುವುದು ಬೇಡ ಎಂದು ವಿಧಾನ ಪರಿಷತ್ ಸದಸ್ಯರಿಗೆ ಮನವೊಲಿಸಿದರು. ಅದಕ್ಕೆ ಶಾಸಕರು ಒಪ್ಪಿ ರಾಜೀನಾಮೆ ನೀಡುವುದನ್ನು ಕೈಬಿಟ್ಟರು.
ಇದೇ ವೇಳೆ ಸಚಿವ ಎಂ.ಸಿ. ಸುಧಾಕರ್ ಮಾತನಾಡಿ, ಮುನಿಯಪ್ಪ ನನ್ನನ್ನು ಎರಡು ಬಾರಿ ಸೋಲಿಸಿದ್ದು ಆಮೇಲೆ ಪಕ್ಷದಿಂದ ಟಿಕೆಟ್ ಸಿಗದೆ ಪಕ್ಷೇತರನಾಗಿ ಸ್ಪರ್ಧೆ ಮಾಡುವಂತಾಗಿತ್ತು. ಆ ನೋವು ಇದೆ. ಜೊತೆಗೆ ನಮ್ಮ ಕ್ಷೇತ್ರದ ಕಾರ್ಯಕರ್ತರಿಗೂ ಮುನಿಯಪ್ಪ ನೋವು ಕೊಟ್ಟಿದ್ದಾರೆ. ಹೀಗಾಗಿ ಅವರ ಕುಟುಂಬಕ್ಕೆ ಟಿಕೆಟ್ ಕೊಡಬಾರದು ಎಂದು ಹೇಳಿಕೆ ನೀಡಿದ್ದಾರೆ.
The tussle over the Congress Lok Sabha ticket for the Kolar constituency in Karnataka took a dramatic turn on Wednesday after three party MLAs and two MLCs arrived at the Vidhana Soudha and threatened to tender their resignations over the issue.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm