ಬ್ರೇಕಿಂಗ್ ನ್ಯೂಸ್
27-03-24 08:56 pm HK NEWS ಕರ್ನಾಟಕ
ಬೆಂಗಳೂರು, ಮಾ.27: ಚಿತ್ರದುರ್ಗ ಎಸ್ಸಿ ಮೀಸಲು ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಮಾಜಿ ಸಚಿವ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಿದೆ. ಆಮೂಲಕ ಹಾಲಿ ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿಗೆ ಕೊಕ್ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಕ್ಷೇತ್ರದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಸೋತಿದ್ದ, ಯಡಿಯೂರಪ್ಪ ಪಾಳಯದ ಹಿಂದುಳಿದ ವರ್ಗದ ನಾಯಕ, ಐದು ಬಾರಿಯ ಶಾಸಕ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ಅಂತಿಮಗೊಳಿಸಿರುವುದನ್ನ ಬಿಜೆಪಿ ಘೋಷಣೆ ಮಾಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಬಿಜೆಪಿ ಎಲ್ಲ 25 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಗಳನ್ನು ಪ್ರಕಟಿಸಿದಂತಾಗಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿಂದಿನಿಂದಲೂ ಪ್ರತಿ ಬಾರಿ ಹೊಸಬರನ್ನು ಕಣಕ್ಕಿಳಿಸುತ್ತ ಬಂದಿದೆ. ಈ ಬಾರಿ ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಮಾದಾರ ಚನ್ನಯ್ಯ ಸ್ವಾಮೀಜಿ, ಜನಾರ್ದನ ಸ್ವಾಮಿ ಸಹಿತ ಹಲವರ ಹೆಸರು ಕೇಳಿಬಂದಿದ್ದವು. ಗೋವಿಂದ ಕಾರಜೋಳ ಹೆಸರು ವಿಜಯಪುರ ಕ್ಷೇತ್ರಕ್ಕೂ ಕೇಳಿಬಂದಿತ್ತು.
ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಸಹಾಯಕರಾಗಿ ವೃತ್ತಿ ಆರಂಭಿಸಿ ಬಳಿಕ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದ ಕಾರಜೋಳ, ಆನಂತರ ಅದೇ ಲೋಕೋಪಯೋಗಿ ಇಲಾಖೆಯಲ್ಲಿ ಸಚಿವರಾಗಿದ್ದು ಕಾಕತಾಳೀಯ ಆಗಿತ್ತು. ಮೂಲತಃ ವಿಜಯಪುರ ಜಿಲ್ಲೆಯವರಾಗಿದ್ದರೂ ರಾಜಕೀಯ ಸಾಧನೆ ಮಾಡಿದ್ದು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ. ಈಗ ಚಿತ್ರದುರ್ಗ ಜಿಲ್ಲೆಗೆ ಅವರ ರಾಜಕೀಯ ಸ್ಥಳಾಂತರಗೊಂಡಿದೆ. ಕಳೆದ ಬಾರಿ ಬೆಂಗಳೂರು ಆನೇಕಲ್ ಮೂಲದ ನಾರಾಯಣ ಸ್ವಾಮಿ ಚಿತ್ರದುರ್ಗದಲ್ಲಿ ಲೋಕಸಭೆ ಕಣಕ್ಕಿಳಿದು ಸಂಸದರಾಗಿದ್ದರು.
BJP Loksabha election 7th list released, Govind karjol to Fight Lok Sabha Elections From Chitradurga on bjp ticket BJP
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm