ಬ್ರೇಕಿಂಗ್ ನ್ಯೂಸ್
02-04-24 09:58 pm Bangalore Correspondent ಕರ್ನಾಟಕ
ಬೆಂಗಳೂರು, ಎ.2: ಲೋಕಸಭಾ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷವು ಕಾಂಗ್ರೆಸ್ ಬೆಂಬಲಿಸಿದ್ದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಕಿಡಿಕಾರಿದ್ದಾರೆ. ಇದರಲ್ಲಿ ನನಗೇನೂ ಅಚ್ಚರಿ ಕಾಣಿಸುತ್ತಿಲ್ಲ. ಕೋಮುವಾದಿ ಶಕ್ತಿಗಳು, ಭಾರತ ವಿರೋಧಿ ಶಕ್ತಿಗಳ ಜೊತೆಗೆ ಕಾಂಗ್ರೆಸ್ ಹಲವು ವರ್ಷಗಳಿಂದ ನಂಟು ಹೊಂದಿದೆ. ಎಸ್ಡಿಪಿಐ ಬೆಂಬಲ ಪಡೆಯುತ್ತೆ ಅಂದರೆ ಕಾಂಗ್ರೆಸ್ ದೇಶದ ಸಾರ್ವಭೌಮತ್ವದ ಮೇಲೆ ನಂಬಿಕೆ ಕಳಕೊಂಡಿದೆ ಎಂದರ್ಥ ಎಂದು ಟೀಕಿಸಿದ್ದಾರೆ.
ಕೇರಳದಲ್ಲಿ ಎಸ್ಡಿಪಿಐ, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಯನ್ನು ಬೆಂಬಲಿಸಿದ್ದು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದಿದೆ. ಎಸ್ಡಿಪಿಐ ಕೇರಳ ಘಟಕದ ರಾಜ್ಯಾಧ್ಯಕ್ಷ ಮೂವಾಟ್ಟುಪುಝ ಅಶ್ರಫ್ ಮೌಲವಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದು, ಕೇರಳದಲ್ಲಿ ಸ್ಪರ್ಧೆ ಮಾಡಲ್ಲ. ಆದರೆ ದೇಶದ 18 ವಿವಿಧ ಕಡೆಗಳಲ್ಲಿ ನಮ್ಮ ಅಭ್ಯರ್ಥಿ ಹಾಕಲಿದ್ದೇವೆ ಎಂದು ಹೇಳಿದ್ದಾರೆ.
ಎಸ್ಡಿಪಿಐ ಹೇಳಿಕೆ ಬಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರಾಮನಗರದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಅಮಿತ್ ಷಾ ಅವರನ್ನು ನ್ಯೂಸ್ 18- ಸಿಎನ್ಎನ್ ಪ್ರತಿಕ್ರಿಯೆ ಕೇಳಿದಾಗ, ತನಗೇನೂ ಈ ರೀತಿಯ ಮೈತ್ರಿಯಿಂದ ಅಚ್ಚರಿಯಾಗಿಲ್ಲ ಎಂದಿದ್ದಾರೆ. ಈ ರೋಡ್ ಶೋನೇ ಎಲ್ಲವನ್ನೂ ಹೇಳುತ್ತದೆ. ಕರ್ನಾಟಕದಲ್ಲಿಯೂ ಮೋದಿಗೆ ಭರ್ಜರಿ ಬೆಂಬಲ ಸಿಗುತ್ತಿದ್ದು, ನಮ್ಮ ಅಭ್ಯರ್ಥಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಿ ಮೋದಿ ದೇಶದ ಜನತೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು 400ಕ್ಕೂ ಹೆಚ್ಚು ಸ್ಥಾನಗಳಿಂದ ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಮೋದಿ ನೇತೃತ್ವದಲ್ಲಿ 11ನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕತೆ 5ನೇ ಸ್ಥಾನಕ್ಕೆ ತಲುಪಿದೆ. ಮೂರನೇ ಬಾರಿಗೆ ಮೋದಿ ಪ್ರಧಾನಿಯಾದರೆ, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಮಾಡಲಿದ್ದಾರೆ ಎಂದು ಅಮಿತ್ ಷಾ ಹೇಳಿದ್ದಾರೆ.
Hitting out at Congress after the Social Democratic Party of India (SDPI) offered to support the UDF in Kerala, Union Home Minister Amit Shah on Tuesday said that grand-old-party does not believe in India’s sovereignty and has been supporting anti-India campaigns for several years.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm