ಬ್ರೇಕಿಂಗ್ ನ್ಯೂಸ್
08-04-24 01:41 pm Bangalore Correspondent ಕರ್ನಾಟಕ
ಬೆಂಗಳೂರು, ಏ.08: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಪೊಲೀಸರಿಗೆ ದೂರು ನೀಡಿದ್ದಾರೆ.
ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಗೆ ಟಬು ರಾವ್ ದೂರು ನೀಡಿದ್ದು, ನನ್ನ ಪತಿ ದಿನೇಶ್ ಗುಂಡೂರಾವ್ ಮತ್ತು ನಮ್ಮ ಕುಟುಂಬದ ಬಗ್ಗೆ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇದಕ್ಕೂ ಮುಂಚೆ ಟಬು ರಾವ್ ಅವರು ಶಾಸಕ ಯತ್ನಾಳ್ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಬಿಜೆಪಿ ನಾಯಕರಿಗೆ ತಮ್ಮ ಟ್ವಿಟರ್ ಖಾತೆಯಲ್ಲಿ ಮನವಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಟಬು, ಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ಸಂಜಯನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದೇವೆ. ನಾನು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ದಿನೇಶ್ ಬಗ್ಗೆ ಮಾತನಾಡಿದರೆ ಪರ್ವಾಗಿಲ್ಲ, ನಮ್ಮ ಬಗ್ಗೆ ಏಕೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಏಪ್ರಿಲ್ 6 ರಂದು ವಿಜಯಪುರ ಜಿಲ್ಲಾ ಬಿಜೆಪಿ ಕಚೇರಿ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಯತ್ನಾಳ್, ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ ಎಂದು ಹೇಳಿದ್ದರು.
Dinesh Gundurao wife approaches police against BJP MLA Yatnal over unsavoury comment against family. Tabu Rao filed a complaint on Sunday at the Sanjayanagar Police Station against Yatnal, the BJP MLA from Vijayapura. Yatnal allegedly used remarks referring to Dinesh Gundu Rao’s inter-religious marriage with Tabu.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm