ಬ್ರೇಕಿಂಗ್ ನ್ಯೂಸ್
10-04-24 04:54 pm HK NEWS ಕರ್ನಾಟಕ
ತುಮಕೂರು, ಏ 10: ನಗರದ ವಿದ್ಯಾನಿಧಿ ಕಾಲೇಜಿನ ವಿದ್ಯಾರ್ಥಿನಿ ಎಂ.ಜ್ಞಾನವಿ ವಾಣಿಜ್ಯ ವಿಭಾಗದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, 600ಕ್ಕೆ 597 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಡಿ.ಎಲ್.ಮಂಜುನಾಥ್, ಡಿ.ಮಂಜುಳಾ ದಂಪತಿಯ ಪುತ್ರಿ ಜ್ಞಾನವಿ. ಕಾಲೇಜಿನ ಹಾಸ್ಟೆಲ್ನಲ್ಲಿದ್ದು, ವಿದ್ಯಾಭ್ಯಾಸ ಮಾಡುತ್ತಿದ್ದರು. ಪ್ರಥಮ ಪಿಯುಸಿಯಲ್ಲಿ 600ಕ್ಕೆ 600 ಅಂಕ ಗಳಿಸಿದ್ದರು.
ಜ್ಞಾನವಿ ಪೋಷಕರು ಬೀಚನಹಳ್ಳಿಯಲ್ಲಿ ಹೋಟೆಲ್ ನಡೆಸುತ್ತಿದ್ದಾರೆ. ಅವರ ಪ್ರೋತ್ಸಾಹ, ಶಿಕ್ಷಕರ ಮಾರ್ಗದರ್ಶನ, ನಿರಂತರ ಶ್ರಮದಿಂದಾಗಿ ಇಡೀ ರಾಜ್ಯದ ಜನರು ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಓದಿನಲ್ಲಿ ಸದಾ ಮುಂದಿದ್ದ ಜ್ಞಾನವಿ ಮೇಲೆ ಪೋಷಕರು ಇಟ್ಟಿದ್ದ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ.
ಹಾಸ್ಟೆಲ್ನಲ್ಲಿ ಇದ್ದುಕೊಂಡು ಅಭ್ಯಾಸ ಮಾಡಿದ್ದು ನೆರವಾಯಿತು. ಯಾವುದೇ ಒಂದು ವಿಷಯವನ್ನು ಓದಲು ಕುಳಿತರೆ ಅದು ಪೂರ್ತಿಯಾಗುವ ತನಕ ಬಿಡುತ್ತಿರಲಿಲ್ಲ. ಫಲಿತಾಂಶ ನೋಡಿ ತುಂಬಾ ಖುಷಿಯಾಗಿದೆ. ಮನೆಯಲ್ಲಿ ಹಬ್ಬದ ವಾತಾವರಣ ಇದೆ ಎಂದು ಜ್ಞಾನವಿ ನಗುತ್ತಲೇ ಮಾತನಾಡಿದರು.
ಕಾಲೇಜಿನಲ್ಲಿ ಪರೀಕ್ಷೆಯ ತಯಾರಿಗೆ ಹೆಚ್ಚಿನ ಒತ್ತು ನೀಡುತ್ತಿದ್ದರು. ವಾರ್ಷಿಕ ಪರೀಕ್ಷೆಗೂ ಮುನ್ನ 8 ಪೂರ್ವಭಾವಿ ಪರೀಕ್ಷೆಗಳು ನಡೆಸಿದ್ದರು. ಇದಕ್ಕೆ ನಿರಂತರವಾಗಿ ಅಭ್ಯಾಸ ಮಾಡುತ್ತಿದ್ದೆ. ಕೊನೆಯ ಪರೀಕ್ಷೆಗೆ ಇದರಿಂದ ಅನುಕೂಲವಾಯಿತು ಎಂದು ತಮ್ಮ ಯಶಸ್ಸಿನ ಗುಟ್ಟು ತಿಳಿಸಿದರು.
ಜ್ಞಾನವಿ ಚಾರ್ಟೆಡ್ ಅಕೌಟೆಂಟ್ ಆಗುವ ಕನಸು ಕಂಡಿದ್ದು, ಇದೇ ಮಾರ್ಗದಲ್ಲಿ ಸಾಗಿದ್ದಾರೆ. ವಿದ್ಯಾವಾಹಿನಿ ಕಾಲೇಜಿನಲ್ಲಿ ಚಾರ್ಟೆಡ್ ಅಕೌಟೆಂಟ್ ಕೋರ್ಸ್ಗೆ ದಾಖಲಾಗುವ ಇಂಗಿತ ವ್ಯಕ್ತಪಡಿಸಿದರು. ಪೋಷಕರು ಹಾಕಿಕೊಟ್ಟ ಮಾರ್ಗದಲ್ಲಿ ಮುಂದೆ ಸಾಗುತ್ತಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ತುಮಕೂರಿಗೆ ಬಂದವರು ತಮ್ಮ ಕೆಲಸದಲ್ಲಿ ಶೇ 100ರಷ್ಟು ಯಶಸ್ಸು ಸಾಧಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
In the Commerce stream, Ganavi M from Vidyanidhi PU College, Tumkur, attained the highest position with a remarkable score of 597 marks.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm