ಬ್ರೇಕಿಂಗ್ ನ್ಯೂಸ್
17-04-24 06:55 pm HK News Desk ಕರ್ನಾಟಕ
ಹುಬ್ಬಳ್ಳಿ, ಎ.17: ಧಾರವಾಡದ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ತೆಯಾದ 18 ಕೋಟಿ ನಗದು ಹಣ ಪ್ರಕರಣದಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯಗೊಂಡಿದ್ದು ಹಣದ ಕಂತೆಯನ್ನು 18 ಬ್ಯಾಗ್ಗಳಲ್ಲಿ ತುಂಬಿಸಿ ಹುಬ್ಬಳ್ಳಿ ಕೇಶ್ವಾಪುರದ ಎಸ್ಬಿಐ ಶಾಖೆಗೆ ರವಾನಿಸಿದ್ದಾರೆ.
ಧಾರವಾಡದ ದಾಸನಕೊಪ್ಪ ಸರ್ಕಲ್ ಬಳಿ ಇದ್ದ ಬಸವರಾಜ್ ದತ್ತುನವರ್ ನಿವಾಸ ಅರ್ನಾ ರೆಸಿಡೆನ್ಸಿಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ಪ್ರಾರಂಭಿಸಿದ್ದರು. ನಿನ್ನೆಯಿಂದ ಹಣದ ಮಶಿನ್ ತಂದು ಹಣದ ಎಣಿಕೆ ನಡೆಸಿದ್ದು ಇಂದು ಮಧ್ಯಾಹ್ನ ಹೊತ್ತಿಗೆ ಪೂರ್ತಿಯಾಗಿದೆ. ಅಕ್ರಮ ಮದ್ಯ ಸಂಗ್ರಹಿಸಿದ್ದಾರೆ ಎನ್ನುವ ಮಾಹಿತಿ ಮೇರೆಗೆ ದಾಳಿ ನಡೆದಿತ್ತು. ಚುನಾವಣಾ ವಿಚಕ್ಷಣ ದಳ ದಾಳಿ ನಡೆಸಿದ್ದು ಈ ವೇಳೆ ದತ್ತೂನವರ ಮನೆಯಲ್ಲಿ ಕಂತೆ ಕಂತೆ ನಗದು ಪತ್ತೆಯಾಗಿತ್ತು. ಅಪಾರ ಪ್ರಮಾಣದ ಹಣ ಪತ್ತೆಯಾಗಿದ್ದರಿಂದ ಐಟಿ ಅಧಿಕಾರಿಗಳು ನಿನ್ನೆ ರಾತ್ರಿಯೇ ಪ್ರಕರಣವನ್ನು ತಮ್ಮ ಸುಪರ್ದಿಗೆ ಪಡೆದಿದ್ದರು. ಹಣ ಎಣಿಸಿ 18 ಬ್ಯಾಗ್ ಗಳಲ್ಲಿ ಪ್ಯಾಕ್ ಮಾಡಿ ಬ್ಯಾಂಕಿಗೆ ಸಾಗಿಸಿದ್ದಾರೆ.

ಇದೇ ವೇಳೆ, ಬಸವರಾಜ್ ದತ್ತುನವರ್ ಅವರನ್ನು ವಿಚಾರಣೆ ನಡೆಸಿದ್ದು ತಾನು ಯು.ಬಿ. ಶೆಟ್ಟಿ ಕನಸ್ಟ್ರಕ್ಷನ್ ಕಂಪನಿಯಲ್ಲಿ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದ. ಈ ಹಿನ್ನೆಲೆ ಹುಬ್ಬಳ್ಳಿಯ ಕಂಪನಿ ಕಚೇರಿಯಲ್ಲಿಯೂ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಉದ್ಯಮಿ ಮತ್ತು ಹುಬ್ಬಳ್ಳಿ ಭಾಗದಲ್ಲಿ ಕಂಟ್ರಾಕ್ಟರ್ ಆಗಿರುವ ಯುಬಿ ಶೆಟ್ಟಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತರಾಗಿದ್ದು ಧಾರವಾಡ ಮತ್ತು ಹುಬ್ಬಳ್ಳಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಬಳಸಿಕೊಳ್ಳಲು ಈ ಹಣ ಕೂಡಿಡಲಾಗಿತ್ತು ಎಂಬ ಆರೋಪಗಳಿವೆ.
ಯು.ಬಿ. ಶೆಟ್ಟಿ ಕಚೇರಿಯಲ್ಲಿ ಪರಿಶೀಲನೆ ನಡೆಸಿದ ಐಟಿ ಅಧಿಕಾರಿಗಳು, 18 ಕೋಟಿ ಹಣದ ಮೂಲದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹಣ ಯಾರಿಗೆ ಸೇರಿದ್ದು, ಬಸವರಾಜ್ ದತ್ತುನವರ್ ಮನೆಯಲ್ಲಿ ಹಣ ಹೇಗೆ ಬಂತು? ಅಷ್ಟೊಂದು ದೊಡ್ಡ ಮೊತ್ತದ ಹಣ ಮನೆಯಲ್ಲಿ ಇಟ್ಟುಕೊಂಡಿದ್ದು ಏಕೆ? ಇದು ಯಾರಿಗೆ ಸೇರಿದ್ದು ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ.
Income Tax (I-T) officials seized Rs 18 crore during a raid from the house of U B Shetty’s accountant Basavaraja Dutunavar at Aarna Residency near Dasanakoppa Circle here. The seized money was later deposited at State Bank of India (SBI) Keshwapur branch in Hubballi.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm