ಬ್ರೇಕಿಂಗ್ ನ್ಯೂಸ್
22-04-24 04:14 pm HK News Desk ಕರ್ನಾಟಕ
ಶಿವಮೊಗ್ಗ, ಎ.22: ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ಇದಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಮುಖ್ಯಮಂತ್ರಿ ನೇಹಾ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ ಸಚಿವರು, ಕಾರ್ಯಕರ್ತರು ಹಾಗೂ ಸಚಿವ ಹೆಚ್. ಕೆ.ಪಾಟೀಲ್ ಭೇಟಿ ನೀಡಿದ್ದಾರೆ. ಮುಂದೆ ಧಾರವಾಡಕ್ಕೆ ತೆರಳಿದ ಸಂದರ್ಭದಲ್ಲಿ ಭೇಟಿ ನೀಡುತ್ತೇನೆ ಹೇಳಿದ್ದಾರೆ.
ಹುಬ್ಬಳ್ಳಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಜಾತ್ಯತೀತ ವ್ಯಕ್ತಿ. ಧಾರವಾಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಉಮೇದುವಾರಿಕೆಯನ್ನು ಹಿಂಪಡೆದು ಜಾತ್ಯಾತೀತ ಪಕ್ಷ ಕಾಂಗ್ರೆಸ್ ಬೆಂಬಲಿಸಬೇಕೆಂದು ಅವರಲ್ಲಿ ಮನವಿ ಮಾಡಿದ್ದೇನೆ. ಅವರ ಮಠ ಜಾತ್ಯಾತೀತವಾಗಿದ್ದು ಅವರ ಬೆಂಬಲ ಅಗತ್ಯವಿದೆ ಎಂದಿದ್ದಾರೆ.
ಬರ ಪರಿಹಾರ ನೀಡಿಲ್ಲದ್ದರ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದೇವೆ. ಪ್ರಕೃತಿ ವಿಕೋಪ ನಿರ್ವಹಣೆ ಕಾಯ್ದೆ ಪ್ರಕಾರ ಕೇಂದ್ರ ತಂಡ ವರದಿ ನೀಡಿದ ಒಂದು ತಿಂಗಳೊಳಗೆ ಇತ್ಯರ್ಥ ಮಾಡಬೇಕು. ಅಕ್ಟೋಬರ್ ತಿಂಗಳಲ್ಲಿ ವರದಿ ಸಲ್ಲಿಸಿದ್ದು ಆರು ತಿಂಗಳಾದರೂ ಇಲ್ಲಿಯವರೆಗೆ ಪರಿಹಾರ ನೀಡಿಲ್ಲ. ನಾನೇ ಖುದ್ದು ಪ್ರಧಾನಿ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಡಿಸೆಂಬರ್ 23ಕ್ಕೆ ಸಭೆ ಕರೆದು ಇತ್ಯರ್ಥ ಮಾಡುವುದಾಗಿ ಹೇಳಿದ್ದರು. ರಾಜ್ಯದಿಂದ ರೈತರಿಗೆ 2000 ರೂ. ಗಳವರೆಗೆ ಪರಿಹಾರ ನೀಡಿದ್ದೇವೆ. 34 ಲಕ್ಷ ರೈತರಿಗೆ 650 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರು, ಮೇವು, ಎನ್.ಆರ್.ಇ.ಜಿ.ಎಸ್. ಅಡಿಯಲ್ಲಿ ಕೆಲಸ ಮಾಡಿಸುತ್ತಿದ್ದು, ಮೇವಿಗೆ ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲ್ಯವನ್ನು ಮುಸ್ಲಿಮರಿಗೆ ಕೊಡುತ್ತಾರೆ ಎಂದು ಪ್ರಧಾನ ಮಂತ್ರಿ ಆರೋಪ ಮಾಡಿರುವ ಬಗ್ಗೆ ಮಾತನಾಡಿ ಪ್ರಧಾನಿಯಾಗಿ ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು. ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ.
ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್
ಕಾಂಗ್ರೆಸ್ ಜಾಹಿರಾತಿಗೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಡೇಂಜರ್ ಎಂಬ ಜಾಹಿರಾತು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೆಣ್ಣು ಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳು ಡೇಂಜರ್ ಆಗುತ್ತವೆಯೇ? ಸಮಾಜವನ್ನು ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡುವುದು ಅಪಾಯಕಾರಿಯೇ ಹೊರತು, ವಿವಿಧತೆಯಲ್ಲಿ ಏಕತೆಯನ್ನು ತರುವುದು ಡೇಂಜರ್ ಅಲ್ಲ. ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯವರ ಮೇಲೆ ರೇಡ್ ಆಗುವುದಿಲ್ಲವೇಕೆ ?
ರಾಜ್ಯದಲ್ಲಿ ಕಾಂಗ್ರೆಸ್ ಇದ್ದರೆ, ಭ್ರಷ್ಟಾಚಾರ ಹೆಚ್ಚಾಗಲಿದೆ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾನೂನು ಪ್ರಕಾರ ರೇಡ್ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ, ಯಡಿಯೂರಪ್ಪ , ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ ?ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ. ಆದಾಯ ತೆರಿಗೆಯನ್ನು ಸರಿಯಾಗಿ ಕಟ್ಟದವರ ಮೇಲೆ ಕ್ರಮವಾಗಲಿ, ಆದರೆ ಒಬ್ಬರ ಮೇಲೆ ರೇಡ್ ಮಾಡಿ ಮತ್ತೊಬ್ಬರನ್ನು ಬಿಡುವ ಬದಲು, ಆದಾಯ ಮೀರಿ ಆಸ್ತಿ ಸಂಪಾದಿಸಿದ ಎಲ್ಲರ ಮೇಲೆ ಕಾನೂನು ಕ್ರಮವಾಗಬೇಕು ಎಂದಿದ್ದಾರೆ.
Chief Minister Siddaramaiah has said the investigation into the murder of Hubballi student, Neha Hiremath, will be handed over to the Criminal Investigation Department (CID).
06-04-25 11:56 am
Bangalore Correspondent
Suicide, Chamarajanagar: ಮಾನಸಿಕ ಖಿನ್ನತೆ ; 14...
05-04-25 10:17 pm
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
06-04-25 09:23 pm
HK News Desk
Waqf land in India: ದೇಶದಲ್ಲಿ ಒಟ್ಟು ಎಷ್ಟು ವಕ್ಫ...
06-04-25 06:39 pm
Annamalai, Bjp: ತಮಿಳಿನಾಡಿನಲ್ಲಿ ಅಣ್ಣಾಮಲೈ ಇಳಿಸಲ...
04-04-25 09:29 pm
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
07-04-25 11:23 am
Mangalore Correspondent
Mangalore news, Crime, Youth thrashed Kanyara...
06-04-25 03:32 pm
Bangalore Murder, Crime: ಅಕ್ರಮ ಸಂಬಂಧ ಶಂಕೆ ; ನ...
05-04-25 08:53 pm
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm