ಬ್ರೇಕಿಂಗ್ ನ್ಯೂಸ್
22-04-24 10:56 pm HK News Desk ಕರ್ನಾಟಕ
ಧಾರವಾಡ, ಏ 22: ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಕೇಂದ್ರ ಸಚಿವ, ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ತೊಡೆತಟ್ಟಿದ್ದ ದಿಂಗಾಲೇಶ್ವರ ಸ್ವಾಮೀಜಿ ಈಗ ಚುನಾವಣಾ ಕಣದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಇದರಿಂದ ಪ್ರಹ್ಲಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ.
ಕೇಂದ್ರ ಸಚಿವ, ಹಾಲಿ ಸಂಸದ ಪ್ರಲ್ಹಾದ್ ಜೋಶಿ ಅವರನ್ನು ಗುರಿಯಾಗಿಸಿಕೊಂಡು, ಲಿಂಗಾಯತ ಸಮುದಾಯಕ್ಕೆ ಜೋಶಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿ, ನಾಮಪತ್ರ ಸಲ್ಲಿಸಿದ್ದರು. ಯಾವುದೇ ಕಾರಣಕ್ಕೂ ಚುನಾವಣಾ ಕಣದಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ನುಡಿದಿದ್ದ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಹಠವನ್ನು ಬದಲಿಸಿದ್ದಾರೆ. ಪ್ರಹ್ಲಾದ್ ಜೋಶಿ ಹಾಗೂ ವಿನೋದ್ ಅಸೂಟಿ ನಡುವೆ ನೇರ ಹಣಾಹಣಿ ನಡೆಯಲಿದೆ
ನನ್ನನ್ನು ಕಣದಿಂದ ಹಿಂದೆ ಸರಿಸುವ ವ್ಯಕ್ತಿ ಈ ಭೂಮಿ ಮೇಲೆ ಹುಟ್ಟಿಲ್ಲ ಎನ್ನುವಂತಹ ಮಾತುಗಳನ್ನು ದಿಂಗಾಲೇಶ್ವರ ಸ್ವಾಮೀಜಿ ಪದೇ ಪದೇ ಹೇಳುತ್ತಿದ್ದರು.
ಗುರುಗಳ ಆದೇಶದ ಮೇರೆಗೆ ನಾಮಪತ್ರ ವಾಪಾಸ್ ಪಡೆದ್ದಿದ್ದೇನೆ. ಅದರ ಹೊರತಾಗಿ ಯಾವುದೇ ಪಕ್ಷಗಳ ಮುಖಂಡರ ಒತ್ತಡದ ಮೇರೆಗೆ ವಾಪಸ್ ಪಡೆದಿಲ್ಲ. ನಾನು ಶಸ್ತ್ರತ್ಯಾಗ ಮಾಡಿಲ್ಲ, ಧರ್ಮಯುದ್ಧ ಮುಂದುವರಿಸುವೆ''
ಇದು ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದ ಬಳಿಕ ಹೇಳಿದ ಸ್ಪಷ್ಟ ನುಡಿಗಳು.
ಶಿರಹಟ್ಟಿ ಫಕೀರೇಶ್ವರ ಮಠದ ಹಿರಿಯ ಪೀಠಾಧಿಪತಿ ಶಿವಯೋಗಿ ಸಿದ್ಧರಾಮ ಮಹಾಸ್ವಾಮಿಗಳು ದಿಂಗಾಲೇಶ್ವರ ಸ್ವಾಮೀಜಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಿರಿ ಎಂದು ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ದಿಂಗಾಲೇಶ್ವರ ಶ್ರೀಗಳು ನಾಮಪತ್ರ ಹಿಂಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾರನ್ನು ಸೋಲಿಸಬೇಕೆಂಬ ನಿರ್ಧಾರಕ್ಕೆ ಬದ್ಧನಾಗಿದ್ದ, ಶೀಘ್ರವೇ ಸಭೆ ಮಾಡಿ ಅಂತಿಮ ತೀರ್ಮಾನ ಮಾಡ್ತೇವೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಪರೋಕ್ಷವಾಗಿ ಎಚ್ಚರಿಕೆಯನ್ನೂ ನೀಡಿದರು.
ಇದೇವೇಳೆ ಸ್ವಾಮೀಜಿಗೆ ಪೇಮೆಂಟ್ ಆಗಿದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯತ್ನಾಳ್ ದು ಬ್ರೈನ್ ಲೆಸ್ ಬಾಡಿ ಎಂದು ಮೂದಲಿಸಿದರು. ನಾನು ನಾಮಪತ್ರ ವಾಪಾಸ್ ಪಡೆಯೋ ಮುಂಚೆ ಅವ್ರು ಹೇಳಿಕೆ ಕೊಟ್ಟಿದ್ದಾರೆ. ಅವ್ರು ತಮ್ಮ ಪಕ್ಷದ ನಾಯಕರ ಬಗ್ಗೆಯೇ ಹಿಗ್ಗಾ ಮುಗ್ಗ ಬೈತಿದ್ದಾರೆ. ಆದ್ರೆ ಯತ್ನಾಳ್ ಬಾಯಿಗೆ ಲಗಾಮು ಹಾಕೋ ಕೆಲಸ ಮಾಡ್ಲಿಲ್ಲ ಎಂದು ಕುಟುಕಿದರು.
Fakira Dingaleshwar Swamiji of Shirahatti Bhavaikyata Mahasansthan Peetha, who filed his nomination papers for the Lok Sabha elections as an independent candidate against Union Minister Pralhad Joshi, withdrew his nomination papers. Dingaleshwar Swamiji's agent Sachin Patil and lawyer Amrita Belloli reached the District Collector's office on Monday and withdrew the nomination papers.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm