ಬ್ರೇಕಿಂಗ್ ನ್ಯೂಸ್
23-04-24 10:11 am Bangalore Correspondent ಕರ್ನಾಟಕ
ಬೆಂಗಳೂರು, ಏ 23: ಶಕ್ತಿ ಯೋಜನೆಯಿಂದ ರಾಜ್ಯದ ಕೋಟ್ಯಂತರ ಮಹಿಳೆಯರು ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದು, ಯೋಜನೆ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ನಡುವೆ ಶಕ್ತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ವಿದ್ಯಾರ್ಥಿನಿಯೊಬ್ಬರು, ಉಚಿತ ಪ್ರಯಾಣದ ಟಿಕೆಟ್ಗಳಿಂದ ಮಾಡಿದ ಹಾರದಿಂದ ಸಿಎಂ ಸಿದ್ದರಾಮಯ್ಯ ಅವರನ್ನು ವಿಭಿನ್ನ ರೀತಿಯಲ್ಲಿ ಸನ್ಮಾನಿಸಿರುವುದು ಗಮನ ಸೆಳೆದಿದೆ.
ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ, ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ಗಳಿಂದ ಮಾಡಿದ್ದ ಹಾರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹಾಕಿ ಗೌರವಿಸಿದ್ದಾರೆ. ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಪರ ಅರಸೀಕೆರೆಯಲ್ಲಿ ಪ್ರಚಾರ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಳಿದ್ದಾಗ ವಿದ್ಯಾರ್ಥಿನಿ ಎಂ.ಬಿ. ಜಯಶ್ರೀ ಫ್ರೀ ಟಿಕೆಟ್ ಹಾರವನ್ನು ಸಿಎಂ ಅವರಿಗೆ ಅರ್ಪಿಸಿದ್ದಾರೆ.


ಮುಖ್ಯಮಂತ್ರಿಗಳಿಗೆ ಹಾರ ಅರ್ಪಿಸುತ್ತಾ ಜಯಶ್ರೀ ಅವರು, “ನೀವು ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಸರ್ಕಾರ ಕೊಟ್ಟ ಉಚಿತ ಪ್ರಯಾಣದ ಫಲವಾಗಿ ನಾನು ಕಾನೂನು ವಿದ್ಯಾಭ್ಯಾಸವನ್ನು ನಿರಾತಂಕವಾಗಿ ಮಾಡಲು ಸಾಧ್ಯವಾಗಿದೆ. ಹೀಗಾಗಿ ಎಲ್ಲಾ ಫ್ರೀ ಟಿಕೆಟ್ ಗಳನ್ನು ಜೋಡಿಸಿಟ್ಟುಕೊಂಡು ಹಾರ ಮಾಡಿದ್ದೆ. ನಿಮಗೆ ಅರ್ಪಿಸುವುದಕ್ಕೆ ತಿಂಗಳುಗಳಿಂದ ಅವಕಾಶಕ್ಕಾಗಿ ಕಾಯುತ್ತಿದ್ದೆ. ಇವತ್ತು ಅರಸೀಕೆರೆಗೆ ಬರ್ತಾ ಇದ್ದೀರಿ ಅಂತ ಗೊತ್ತಾಯ್ತು. ಒಂದೇ ಉಸಿರಲ್ಲಿ ಹಾರ ಹಿಡ್ಕೊಂಡು ಓಡಿ ಬಂದಿದ್ದೇನೆ” ಎನ್ನುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿ ಆಶೀರ್ವಾದ ಪಡೆದಕೊಂಡರು.
ವಿದ್ಯಾರ್ಥಿನಿ ಉಚಿತ ಟಿಕೆಟ್ಗಳ ಹಾರ ಹಾಕಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್ ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷ: ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ?
ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್ ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಹಾಕಿ ಕೃತಜ್ಞತೆ ಹೇಳಿದಳು.
Crores of women in the state are travelling free of cost in transport buses under the Shakti scheme and the scheme is being widely appreciated by the public. Meanwhile, a student, who is availing the benefits of shakti scheme, felicitated Chief Minister Siddaramaiah in a different way with a garland made of free travel tickets.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm