ಬ್ರೇಕಿಂಗ್ ನ್ಯೂಸ್
23-04-24 07:50 pm HK News Desk ಕರ್ನಾಟಕ
ಹುಬ್ಬಳ್ಳಿ , ಏ.23: ಇತ್ತೀಚೆಗೆ ಕೊಲೆಯಾದ ಕಾಲೇಜು ಯುವತಿ ನೇಹಾ ಅವರ ತಂದೆ ನಿರಂಜನ ಹಿರೇಮಠ ಜೊತೆ ಸಿಎಂ ಸಿದ್ದರಾಮಯ್ಯ ಫೋನ್ ಮೂಲಕ ಮಾತನಾಡಿ, "ವೆರಿ ಸ್ವಾರಿ. ನಾವು ನಿಮ್ಮ ಜೊತೆ ಇರ್ತೀವಿ" ಎಂದು ಧೈರ್ಯ ತುಂಬಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರು ನಿರಂಜನ ಹಿರೇಮಠ ಅವರ ಮನೆಗೆ ಭೇಟಿ ನೀಡಿದ ವೇಳೆ ಸಿಎಂ ಫೋನ್ ಮೂಲಕ ಮಾತನಾಡಿದ್ದಾರೆ.
ಬಳಿಕ ಪ್ರತಿಕ್ರಿಯಿಸಿದ ನಿರಂಜನ ಹಿರೇಮಠ, "ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದಕ್ಕೆ ಸಮಾಧಾನವಿದೆ. ಸ್ಪೆಷಲ್ ಕೋರ್ಟ್ ವಿಚಾರಕ್ಕೂ ಸಮಾಧಾನ ತರಿಸಿದೆ. ಸಿಎಂಗೆ ಧನ್ಯವಾದ" ಎಂದರು.

ಸಚಿವ ಎಚ್.ಕೆ.ಪಾಟೀಲ ಪ್ರತಿಕ್ರಿಯಿಸಿ, ''ನ್ಯಾಯದಾನ ವಿಳಂಬವಾಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ. ಇವತ್ತು ಉಚ್ಛ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತದೆ. ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಅನಿವಾರ್ಯ ಕಾರಣದಿಂದ ಸಿಎಂ ಇಲ್ಲಿಗೆ ಬರಲು ಆಗಿಲ್ಲ. ಹೀಗಾಗಿ, ನಿರಂಜನ್ ಹಿರೇಮಠ ಅವರೊಂದಿಗೆ ಫೋನ್ನಲ್ಲಿ ಮಾತನಾಡಿ ಸಾಂತ್ವನ ಹೇಳಿದ್ದಾರೆ'' ಎಂದು ತಿಳಿಸಿದರು.
ತಪ್ಪು ಮಾಹಿತಿಯಿಂದ ಮಾತನಾಡಿದ್ದೇನೆ ;
"ನನ್ನ ಮಗಳ ಕೊಲೆ ಪ್ರಕರಣದಲ್ಲಿ ಸರ್ಕಾರ ತಕ್ಷಣ ಸ್ಪಂದಿಸಿದೆ. ಮಾಹಿತಿ ಕೊರತೆಯಿಂದ ಸರ್ಕಾರದ ವಿರುದ್ಧ ಹೇಳಿಕೆ ಕೊಟ್ಟಿದ್ದೇವೆ. ಪೊಲೀಸ್ ಆಯುಕ್ತರ ವಿರುದ್ಧವೂ ಮಾತನಾಡಿದ್ದೇನೆ. ದುಃಖದಲ್ಲಿ ಮಾಹಿತಿ ಕೊರತೆಯಿಂದ ಮಾತನಾಡಿದ್ದೆ" ಎಂದು ತಂದೆ ನಿರಂಜನ ಹಿರೇಮಠ ಇದೇ ಸಂದರ್ಭದಲ್ಲಿ ಹೇಳಿದರು.

10-12 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚನೆ ;
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಈಗಾಗಲೇ ಸಿಒಡಿಗೆ ಒಪ್ಪಿಸಿದ್ದು 10-12 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನೇಹಾ ಹತ್ಯೆ ಪ್ರಕರಣವನ್ನು ಸಿಒಡಿಗೆ ವಹಿಸುವ ಸಂಬಂಧ ಮುಖ್ಯಮಂತ್ರಿಗಳು ಮತ್ತು ನಾನು ಚರ್ಚಿಸಿ ತೀರ್ಮಾನ ಕೈಗೊಂಡಿದ್ದು, ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿಗೆ ತೆರಳಿ ಪೊಲೀಸರಿಂದ ನೇಹಾ ಹತ್ಯೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದರು.
ನೇಹಾ ಹತ್ಯೆ ಹಿಂದೆ ಯಾರದೇ ಕೈವಾಡ ಇದ್ದರೂ, ಯಾರೇ ಭಾಗಿಯಾಗಿದ್ದರೂ ನಿಷ್ಪಕ್ಷಪಾತ ತನಿಖೆ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಸಿಒಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹತ್ಯೆಯಾಗಿರುವ ನೇಹಾ ತಂದೆ-ತಾಯಿಗೆ ನ್ಯಾಯ ಸಿಗುವ ವಿಶ್ವಾಸ ನನಗಿದೆ. ತನಿಖೆಯ ನಂತರ ಸತ್ಯಾಂಶವೂ ಹೊರಗೆ ಬರಲಿದೆ ಎಂದ ಅವರು, ನನ್ನ ಹೇಳಿಕೆಯಿಂದ ಏನಾದರೂ ನೇಹಾ ತಂದೆ-ತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆಂದು ಪುನರುಚ್ಚರಿಸಿದರು.
Karnataka Chief Minister Siddaramaiah on Tuesday spoke to the father of slain student Neha Hiremath over the phone and said "sorry" over his daughter's killing and assured that "we will be on your side."
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm