ಬ್ರೇಕಿಂಗ್ ನ್ಯೂಸ್
29-04-24 11:33 am HK News Desk ಕರ್ನಾಟಕ
ಮೈಸೂರು, ಎ.29: ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ದಲಿತ ಮುಖಂಡರಾಗಿದ್ದ ವಿ. ಶ್ರೀನಿವಾಸ ಪ್ರಸಾದ್(76) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಏಪ್ರಿಲ್ 27ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದರು.
ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ನಸುಕಿನ 2 ಗಂಟೆ ವೇಳೆಗೆ ನಿಧನರಾಗಿದ್ದಾರೆ. ಬೆಳಗ್ಗೆ ಮೈಸೂರಿಗೆ ಪಾರ್ಥಿವ ಶರೀರವನ್ನು ರವಾನಿಸಿದ್ದು ಜಯಲಕ್ಷ್ಮೀ ಪುರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
1947ರ ಆಗಸ್ಟ್ 6ರಂದು ಮೈಸೂರಿನಲ್ಲಿ ಜನಿಸಿದ ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್ ಅವರು ಮೈಸೂರು ಭಾಗದ ಪ್ರಮುಖ ದಲಿತ ನಾಯಕರಲ್ಲಿ ಒಬ್ಬರಾಗಿದ್ದರು. 1974ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದು 1980ರಲ್ಲಿ ಮೊದಲ ಬಾರಿಗೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸಂಸದರಾಗಿದ್ದರು. 1984, 1989, 1991ರಲ್ಲೂ ಕಾಂಗ್ರೆಸ್ ನಿಂದ ಗೆಲುವು ಸಾಧಿಸಿದ್ದರು.
1999ರಿಂದ ಜೆಡಿಯು ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ 1999ರಿಂದ 2004ರ ವರೆಗೆ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಮತ್ತೆ ಕಾಂಗ್ರೆಸ್ ಸೇರಿದ್ದ ಅವರು 2008 ಮತ್ತು 2013ರಲ್ಲಿ ಕಾಂಗ್ರೆಸ್ ನಿಂದ ನಂಜನಗೂಡು ಸಂಸದರಾಗಿ ಆಯ್ಕೆಯಾಗಿದ್ದರು. 2013ರಿಂದ 2016ರ ವರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.
2016ರಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದಿಂದ ತೆಗೆದಾಗ ಮುನಿಸಿಕೊಂಡು ಬಿಜೆಪಿ ಸೇರಿದ್ದರು. 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದು ಕಾಂಗ್ರೆಸ್ ನ ಆರ್. ಧ್ರುವನಾರಾಯಣ್ ಅವರನ್ನು ಸೋಲಿಸಿದ್ದರು. ಕಾಂಗ್ರೆಸ್, ಜನತಾದಳ, ಬಿಜೆಪಿ ಮತ್ತು ಪಕ್ಷೇತರರಾಗಿಯೂ ಒಟ್ಟು 14 ಬಾರಿ ಚುನಾವಣೆಗೆ ಸ್ಪರ್ಧಿಸಿರುವ ಅವರು 11 ಬಾರಿ ಗೆಲುವು ಸಾಧಿಸಿದ್ದರು. ಅದರಲ್ಲಿ 6 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರೆ, 5 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
Bengaluru: BJP MP from Karnataka's Chamarajanagar and former Union minister V Sreenivasa Prasad, who was undergoing treatment at a private hospital here, died on Monday, family sources said. He was 76. Prasad is survived by his wife and three daughters. The six-time MP from Chamarajanagar and two-time MLA from Nanjangud in Mysuru district was ailing for some time.
05-04-25 10:17 pm
HK News Desk
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
Kalaburagi Accident Mini Bus and Truck: ಕಲಬುರ...
05-04-25 12:21 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
05-04-25 08:53 pm
Bangalore Correspondent
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm