ಬ್ರೇಕಿಂಗ್ ನ್ಯೂಸ್
29-04-24 02:11 pm Bangalore Correspondent ಕರ್ನಾಟಕ
ಬೆಂಗಳೂರು, ಎ.29: ರಾಜ್ಯಾದ್ಯಂತ ಭಾರೀ ಬಿರುಗಾಳಿ ಎಬ್ಬಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಲೋಕಸಭೆ ಚುನಾವಣೆಗೆ ಮೊದಲೇ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಹಾಸನದ ಪ್ರಮುಖರೊಬ್ಬರು ಪತ್ರ ಬರೆದಿದ್ದರು. ಪ್ರಜ್ವಲ್ ಗೆ ಈ ಬಾರಿ ಟಿಕೆಟ್ ಕೊಡಬಾರದೆಂದು ಹಾಸನದ ಬಿಜೆಪಿ ನಾಯಕರೇ ಆಗ್ರಹಿಸಿದ್ದರು ಎನ್ನುವುದು ಬೆಳಕಿಗೆ ಬಂದಿದೆ.
2023ರ ಡಿಸೆಂಬರ್ 8ರಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರಗೆ ಹೊಳೆನರಸೀಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದೇವರಾಜ ಗೌಡ ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ ಎನ್ನಲಾದ ಅಶ್ಲೀಲ ವಿಡಿಯೋಗಳ ಕುರಿತು ಗಮನ ಸೆಳೆದಿದ್ದರು. ವಿಜಯೇಂದ್ರ ಅವರಿಗೆ ಎರಡು ಪುಟಗಳ ಪತ್ರ ಬರೆದಿದ್ದ ದೇವರಾಜ್ ಗೌಡ ಹಾಸನದಲ್ಲಿ ಪ್ರಜ್ವಲ್ ರೇವಣ್ಣನವರಿಗೆ ಸೇರಿದ ಸುಮಾರು 3 ಸಾವಿರ ಅಶ್ಲೀಲ ವಿಡಿಯೋಗಳು ಜಿಲ್ಲೆಯಾದ್ಯಂತ ಹರಿದಾಡುತ್ತಿದ್ದು ಸರ್ಕಾರಿ ಅಧಿಕಾರಿಗಳು, ಯುವತಿಯರು, ಮನೆಗೆಲಸದವರು ಸೇರಿದಂತೆ ಅನೇಕರು ಈ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಮಾಹಿತಿ ನೀಡಿದ್ದರು.

ಪೆನ್ ಡ್ರೈವ್ ಹೊರಗೆ ಬರುತ್ತಿದ್ದಂತೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಂತ್ರಸ್ತರು ಪ್ರಜ್ವಲ್ ರೇವಣ್ಣಗೆ ಬ್ಲಾಕ್ಮೇಲ್ ಮಾಡುತ್ತಿದ್ದಾರೆ. ಇದರ ಬಗ್ಗೆ ನೀವು ಗಮನಹರಿಸಬೇಕೆಂದು ದೇವರಾಜ ಗೌಡ ಪತ್ರದಲ್ಲಿ ಮನವಿ ಮಾಡಿದ್ದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ಹಲವು ಆರೋಪಗಳು ಕೇಳಿಬಂದಿವೆ. ನನಗೆ ತಿಳಿದಿರುವ ಮಾಹಿತಿ ಪ್ರಕಾರ 2976 ವಿಡಿಯೋಗಳಿವೆ. ಕೆಲವು ವಿಡಿಯೋಗಳನ್ನು ಮಹಿಳೆಯರಿಗೆ ತೋರಿಸಿ ಬ್ಲಾಕ್ಮೇಲ್ ಮಾಡಿ ಲೈಂಗಿಕ ಚಟುವಟಿಕೆಗಳಿಗೆ ಪ್ರಜ್ವಲ್ ರೇವಣ್ಣ ಬಳಸಿಕೊಂಡಿದ್ದಾರೆ ಎಂಬ ಆರೋಪವಿದೆ. ಈಗಾಗಲೇ ಪೆನ್ ಡ್ರೈವ್ನ್ನು ಹಾಸನ ಜಿಲ್ಲೆಯ ಕೆಲವು ಕಾಂಗ್ರೆಸ್ ನಾಯಕರು ಎಐಸಿಸಿ ಅಧ್ಯಕ್ಷರಿಗೆ ತಲುಪಿಸಿದ್ದಾರೆ ಎಂಬ ಮಾಹಿತಿ ಇದೆ. ನಾವು ಇಂಥ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪತ್ರದಲ್ಲಿ ಹೇಳಿದ್ದರು.
ಜೆಡಿಎಸ್ ಜೊತೆ ನಾವು ಮೈತ್ರಿ ಮಾಡಿಕೊಂಡಿರುವುದರಿಂದ ಹಾಸನದಲ್ಲಿ ಎನ್ಡಿಎ ಅಭ್ಯರ್ಥಿಗೆ ಬೆಂಬಲಿಸಿದರೆ ಬಿಜೆಪಿಗೆ ಹೊಡೆತ ಬೀಳಲಿದೆ. ಏಕೆಂದರೆ ಕಾಂಗ್ರೆಸ್ ನಾಯಕರ ಕೈಗೆ ಈಗಾಗಲೇ ಪೆನ್ಡ್ರೈವ್ಗಳು ಕೈ ಸೇರಿದ್ದು, ಮತದಾನ ನಡೆಯುವ ಮುನ್ನ ಅಂದರೆ ಒಂದು ವಾರದೊಳಗೆ ಇವುಗಳನ್ನು ಮನೆಗೆ ಮನೆಗೆ ತಲುಪಿಸಲು ವ್ಯವಸ್ಥಿತವಾದ ತಂತ್ರ ಹೆಣೆಯಲಾಗಿದೆ. ಮಹಿಳೆಯರನ್ನು ಅಕ್ರಮ ಚಟುವಟಿಕೆಗಳಿಗೆ ಬಳಸಿಕೊಂಡಿರುವ ಅಭ್ಯರ್ಥಿಗೆ ಬಿಜೆಪಿ ಬೆಂಬಲ ನೀಡಿದರೆ ಜಿಲ್ಲೆಯಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಇದರ ಬಗ್ಗೆ ನೀವು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ದೇವರಾಜ ಗೌಡ ಅವರು ವಿಜಯೇಂದ್ರಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದರು ಎಂಬುದು ಈಗ ಬಹಿರಂಗಗೊಂಡಿದೆ.
Ahead of the Lok Sabha elections, a prominent leader from Hassan had written a letter to state BJP president Vijayendra over the obscene videos allegedly belonging to Hassan MP Prajwal Revanna. It has come to light that bjp leaders in Hassan had demanded that Prajwal should not be given a ticket this time.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
21-04-26 12:44 pm
HK News Staffer
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm