ಬ್ರೇಕಿಂಗ್ ನ್ಯೂಸ್
29-04-24 09:08 pm HK News Desk ಕರ್ನಾಟಕ
ಹಾಸನ, ಏ.29: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಇಂದು ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದ್ರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮಾ ಅವರಿಗೆ ಮನವಿ ಮಾಡಿದ್ರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ರು. ಈ ವೇಳೆ ಮಾತನಾಡಿದ ಸತ್ಯಭಾಮ, ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು. ಶಿಶುಪಾಲನಿಗೆ ಕೃಷ್ಣ ನೂರು ತಪ್ಪು ಮಾಡಲು ಅವಕಾಶ ಕೊಟ್ಟ, ಆದರೆ ನೂರಾ ಒಂದನೇ ತಪ್ಪು ಮಾಡಲು ಅವಕಾಶ ಕೊಡಲಿಲ್ಲ ಅಂತ ಮಾರ್ಮಿಕವಾಗಿ ನುಡಿದ್ರು.

ರಾಜಕಾರಣಿಯಂತೆ ರೇವಣ್ಣ ಕುಟುಂಬದ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಜಿಲ್ಲಾಧಿಕಾರಿ ಸತ್ಯಭಾಮ, ಈಗಲೂ ಎಲ್ಲಾ ರೀತಿಯಲ್ಲೂ ನ್ಯಾಯ ಸಿಗುತ್ತದೆ ಎಂದು ಭರವಸೆ ನೀಡಿದ್ರು. ಎಲ್ಲ ಹೋರಾಟಗಾರರು ಬಂದಿದ್ದಾರೆ. ನಿಮ್ಮೆಲ್ಲರ ಮನವಿಯನ್ನು ಪರಿಗಣಿಸಿದ್ದೀನಿ. ಸೂಕ್ತ ತನಿಖೆಯಾಗಿ ನ್ಯಾಯ ಸಿಗುತ್ತೆ ಅಂತ ಭರವಸೆ ನೀಡಿದ್ರು.
ಇಂತ ಘಟನೆಯಾದಾಗ ನಾವು ಪ್ರತಿಭಟಿಸಬೇಕು ಅಂತ ಡಿಸಿ ಸತ್ಯಭಾಮಾ ಹೇಳಿದ್ರು. ತಮ್ಮನ್ನು ತಾವು ರಕ್ಷಣೆ ಮಾಡುವಷ್ಟು ಮಹಿಳೆ ಮುಂದುವರೆದಿದ್ದಾರೆ ಎಂದರು. ಇನ್ನು ನಾವು ನಿಮ್ಮ ಜೊತೆ ಇದ್ದೇವೆ ಎಂದು ಸತ್ಯಭಾಮಾ ಪ್ರತಿಭಟನಾಕಾರರಿಗೆ ಭರವಸೆ ನೀಡಿದ್ರು.
Hassan DC Sathyabhama slams Prajwal Revanna and family over leaked sex videos. Protest was held all over Hassan city by various activit. A memorandum was given to DC to give proper justice to the victims.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm