ಬ್ರೇಕಿಂಗ್ ನ್ಯೂಸ್
30-04-24 04:12 pm HK News Desk ಕರ್ನಾಟಕ
ಹಾಸನ, ಎ.30: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದು ತಾನು ವಿಡಿಯೋ ಇದ್ದ ಪೆನ್ ಡ್ರೈವನ್ನು ಬಿಜೆಪಿ ಮುಖಂಡ ದೇವರಾಜೇ ಗೌಡ ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್ನವರಿಗೆ ನಾನೇ ಕೊಟ್ಟಿದ್ದಾಗಿ ಸುದ್ದಿ ಹಬ್ಬಿಸುತ್ತಿದ್ದಾರೆ. ಅದೆಲ್ಲ ಸುಳ್ಳು ಎಂದು ಹೇಳಿದ್ದಾರೆ.
ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ಕೆಲವು ವಿಚಾರಗಳನ್ನು ಹೇಳಿಕೊಂಡಿದ್ದಾನೆ. ‘ಹದಿನೈದು ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟಿದ್ದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ದೂರವಾಗಿದ್ದೆ. ಸೇಡು ತೀರಿಸಿಕೊಳ್ಳಲು ಕಾನೂನು ಹೋರಾಟಕ್ಕೆ ಮುಂದಾಗಿದ್ದೆ.
ಬಿಜೆಪಿ ಮುಖಂಡ ದೇವರಾಜೇಗೌಡ ಅವರು ದೇವೇಗೌಡರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಬೇರೆ ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋಗಿ ವಿಷಯ ಹೇಳಿಕೊಂಡಿದ್ದೆ. ತನ್ನಲ್ಲಿ ವಿಡಿಯೋ ಇರುವ ಬಗ್ಗೆ ತಿಳಿದು ಅಶ್ಲೀಲ ವಿಡಿಯೋ, ಫೋಟೊ ರಿಲೀಸ್ ಮಾಡಬಾರದು ಎಂದು ಸ್ಟೇ ತಗೊಂಡಿದ್ದರು. ಈ ಬಗ್ಗೆ ಕೋರ್ಟಿಗೆ ಉತ್ತರ ನೀಡಬೇಕಿತ್ತು. ದೇವರಾಜ ಗೌಡ ಬಳಿ ಹೇಳಿದಾಗ, ಕೋರ್ಟ್ ಕೇಸನ್ನು ನಾನೇ ನೋಡಿಕೊಳ್ಳುತ್ತೇನೆ ಎಂದಿದ್ದರು. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ಎಲ್ಲ ಕೊಟ್ಟು ಬಿಡು. ಕೋರ್ಟಿಗೆ ಕೊಡಲು ಬೇಕಾಗುತ್ತೆ ಎಂದು ಹೇಳಿ ದೇವರಾಜೇಗೌಡ ವಿಡಿಯೋ ಕಾಪಿಯನ್ನು ಪಡೆದಿದ್ರು.
ಇದು ಬಿಟ್ಟರೆ ಬೇರೆ ಯಾವುದೇ ವ್ಯಕ್ತಿಗೆ ನಾನು ವಿಡಿಯೋ ಕೊಟ್ಟಿಲ್ಲ. ಕಾಂಗ್ರೆಸ್ ನವರಿಗೆ ಕೊಟ್ಟಿದ್ದು ನಾನೇ ಅಂತ ಸುದ್ದಿ ಹಬ್ಬಿಸುತ್ತಿದ್ದಾರೆ. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್ ನವರಿಂದ ನ್ಯಾಯ ಸಿಗಲ್ಲ ಅಂತ ಇವರಿಗೆ ಕೊಟ್ಟಿದ್ದೆ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್ ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇವತ್ತು ಎಸ್ಐಟಿ ಮುಂದೆ ಹಾಜರಾಗಿ ಎಲ್ಲವನ್ನೂ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.
ರೇವಣ್ಣ ಮನೆಯಲ್ಲಿ ಏನೆಲ್ಲಾ
ನಡೆದಿದೆ, ಏನೆಲ್ಲಾ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆಯೋ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
Prajwal Revanna car driver says he gave sex videos to BJP leader Devaraje Gowda not Congress. Karthik, a former driver of the Revanna family, on Tuesday, denied that he shared the pen drive containing the videos showing purported sexual acts by suspended Janata Dal (Secular) leader Prajwal Revanna with the Congress, asserting that he had only given the videos to Karnataka Bharatiya Janata Party (BJP) leader Devaraje Gowda.
05-04-25 10:17 pm
HK News Desk
HD Kumaraswamy, Congress, D K Shivakumar: ಮಹಮ...
05-04-25 09:43 pm
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಕಾಂ...
05-04-25 08:12 pm
BJP Yatnal; ಬಿಜೆಪಿಯಿಂದ ಉಚ್ಚಾಟನೆಗೊಂಡ ಶಾಸಕ ಬಸನಗ...
05-04-25 02:47 pm
Kalaburagi Accident Mini Bus and Truck: ಕಲಬುರ...
05-04-25 12:21 pm
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 07:49 pm
Udupi Correspondent
Mangalore Jail, Jammer, Vedavyas Kamath; ಜೈಲಿ...
05-04-25 01:16 pm
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
05-04-25 08:53 pm
Bangalore Correspondent
Cyber Fraud Bangalore, Plusmarts; ಫೇಸ್ಬುಕ್ ಮಹ...
05-04-25 04:27 pm
Anwar Manippady threat, Mangalore crime: ವಕ್ಪ...
04-04-25 03:03 pm
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm