ಬ್ರೇಕಿಂಗ್ ನ್ಯೂಸ್
02-05-24 10:23 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.2: ಕರ್ನಾಟಕದ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಆಯ್ಕೆ ಮಾಡಲು ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಇದೇ ಜೂನ್ 3ರಂದು ಆರು ಸ್ಥಾನಗಳ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬೀಳುವುದಕ್ಕೂ ಮುನ್ನ ರಾಜ್ಯದಲ್ಲಿ ಪರಿಷತ್ತಿನ ಸ್ಥಾನಕ್ಕಾಗಿ ಕಾಂಗ್ರೆಸ್- ಬಿಜೆಪಿ ನಡುವೆ ಜಟಾಪಟಿಗೆ ಮತ್ತೊಂದು ವೇದಿಕೆ ಸಿದ್ಧವಾಗಿದೆ.
ಈಶಾನ್ಯ ಪದವೀಧರ ಕ್ಷೇತ್ರದ ಸದಸ್ಯ ಡಾ.ಚಂದ್ರಶೇಖರ ಬಿ. ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರದ ಸದಸ್ಯ ಆಯನೂರು ಮಂಜುನಾಥ್ (2023 ಎಪ್ರಿಲ್ 19ರಂದು ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು), ಬೆಂಗಳೂರು ಪದವೀಧರ ಕ್ಷೇತ್ರದ ಸದಸ್ಯ ಎ.ದೇವೇಗೌಡ, ದಕ್ಷಿಣ – ಪೂರ್ವ ಕ್ಷೇತ್ರದ ಡಾ.ವೈ.ಎ.ನಾರಾಯಣ ಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದ ಎಸ್.ಎಲ್.ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇ ಗೌಡ(2024 ಮಾರ್ಚ್ 23ರಂದು ರಾಜಿನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು) ಇವರ ಸದಸ್ಯತ್ವ ಅವಧಿ ಇದೇ ಜೂನ್ 21ಕ್ಕೆ ಕೊನೆಯಾಗಲಿದ್ದು, ಅದಕ್ಕೂ ಮುನ್ನ ಆ ಸ್ಥಾನಗಳನ್ನು ತುಂಬಿಸಲು ಚುನಾವಣೆ ಘೋಷಿಸಲಾಗಿದೆ.
ಮೂರು ಪವವೀಧರ ಮತ್ತು ಮೂರು ಶಿಕ್ಷಕರ ಕ್ಷೇತ್ರದ ಸದಸ್ಯರ ಚುನಾವಣೆಗೆ ಇದೇ ಮೇ 9ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಳ್ಳಲಿದೆ. ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನಾಂಕವಾಗಿದ್ದು, 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೆ ದಿನವಾಗಿದೆ. ಜೂನ್ 3ರಂದು ಸೋಮವಾರ ಬೆಳಗ್ಗೆ 8ರಿಂದ ಸಂಜೆ ನಾಲ್ಕು ಗಂಟೆಯ ವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದ್ದು, ಜೂನ್ 12ರ ಮೊದಲು ಒಟ್ಟು ಚುನಾವಣಾ ಪ್ರಕ್ರಿಯೆ ಮುಗಿಯಲಿದೆ.
ಕಣಕ್ಕಿಳಿಯುವವರು ಯಾರ್ಯಾರು ?
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ಸಿನ ಹಾಲಿ ಸದಸ್ಯ ಭೋಜೇಗೌಡ ಮತ್ತೆ ಸ್ಪರ್ಧಿಸಲು ತಯಾರಿ ನಡೆಸಿದ್ದರೆ, ಬಿಜೆಪಿಯಿಂದ ಮಂಗಳೂರಿನ ಸಹಕಾರಿ ಭಾರತಿ ಮುಖಂಡ ಹರೀಶ್ ಆಚಾರ್ಯ ಸ್ಪರ್ಧಾ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ನೈರುತ್ಯ ಪದವೀಧರ ಕ್ಷೇತ್ರದಿಂದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಸ್ಪರ್ಧಿಸಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಇರುವುದರಿಂದ ಯಾವ ಸೀಟು ಯಾರಿಗೆ ಸಿಗುತ್ತೆ ಎನ್ನುವುದು ಕುತೂಹಲ ಮೂಡಿಸಿದೆ. ಬಿಜೆಪಿ ಬಿಟ್ಟಿರುವ ಆಯನೂರು ಮಂಜುನಾಥ್ ಪದವೀಧರ ಕ್ಷೇತ್ರದಿಂದ ಮತ್ತೆ ಆಯ್ಕೆ ಬಯಸಿದ್ದಾರೆ. ಇತ್ತೀಚೆಗೆ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿರುವ ಮರಿತಿಬ್ಬೇ ಗೌಡ ಕೂಡ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವ ಸಾಧ್ಯತೆಯಿದೆ.
Karnataka Legislative Council Election Schedule June 3rd, may 16th nomination
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm