ಬ್ರೇಕಿಂಗ್ ನ್ಯೂಸ್
03-05-24 04:29 pm HK News Desk ಕರ್ನಾಟಕ
ಮೈಸೂರು, ಮೇ.3: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ.
ಕೆಆರ್ ನಗರ ಠಾಣೆಗೆ ದೂರು ನೀಡಿದ್ದು ಅಶ್ಲೀಲ ವಿಡಿಯೊದಲ್ಲಿ ತನ್ನ ತಾಯಿ ಚಿತ್ರವೂ ಇತ್ತು, ಬಳಿಕ ಅವರು ಕಣ್ಮರೆಯಾಗಿದ್ದಾರೆ ಎಂದು ಆಕೆಯ ಪುತ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದಾಗಿದ್ದಾರೆ. ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿ ಚಿತ್ರವೂ ಇದೆ. ವಿಡಿಯೋ ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಅನ್ವಯ ಹೆಚ್ಡಿ ರೇವಣ್ಣ ವಿರುದ್ಧ ಸೆಕ್ಷನ್ 364/A, 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ರೇವಣ್ಣರನ್ನು ಆರೋಪಿ ಸಂಖ್ಯೆ 1 ಹಾಗೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದು ನಮೂದಿಸಲಾಗಿದೆ.
ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಹೊಳೆನರಸೀಪುರದ ಚೆನ್ನಾಂಬಿಕಾ ಥಿಯೇಟರ್ ಪಕ್ಕದ ಮನೆಯಲ್ಲಿ ಮಹಿಳೆ ಸುಮಾರು 6 ವರ್ಷ ಕೆಲಸ ಮಾಡಿದ್ದರು. ನಂತರ ಕೆಲಸ ಬಿಟ್ಟು ಬಂದು ನಮ್ಮೂರಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ದರು. ಈಗ ಲೋಕಸಭೆ ಚುನಾವಣೆ ವೇಳೆ ಸತೀಶ್ ಎಂಬವರು, ಭವಾನಿ ರೇವಣ್ಣ ಕರೆಯುತ್ತಿದ್ದಾರೆ ಎಂದು ಹೇಳಿ ಕರೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ರೇವಣ್ಣ ತೋಟದ ಮನೆಗಳಿಗೆ ಎಸ್ಐಟಿ ದಾಳಿ
ಇದೇ ವೇಳೆ, ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಎಚ್.ಡಿ. ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ ಬೆಂಗಳೂರು ಹಾಗೂ ಹಾಸನ ಜಿಲ್ಲೆಯ ಮನೆಗಳು ಹಾಗೂ ಫಾರಂ ಹೌಸ್ಗಳಿಗೆ ದಾಳಿ ನಡೆಸಿ ತೀವ್ರ ತಪಾಸಣೆ ನಡೆಸಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವ ಮನೆ, ಹೊಳೆನರಸೀಪುರದ ಪಡುವಲಹಿಪ್ಪೆಯ ಫಾರ್ಮ್ ಹೌಸ್, ಸೂರಜ್ ರೇವಣ್ಣಗೆ ಸೇರಿದ ಗನ್ನಿಕಡದಲ್ಲಿರುವ ಫಾರ್ಮ್ ಹೌಸ್ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 30ಕ್ಕೂ ಅಧಿಕ ಅಧಿಕಾರಿಗಳು, ಸಿಬ್ಬಂದಿ ಏಕಕಾಲಕ್ಕೆ ದಾಳಿ ಮಾಡಿದ್ದು, ಮಹತ್ವದ ಸಾಕ್ಷ್ಯಗಳನ್ನು ಕಲೆಹಾಕಿದ್ದಾರೆ.
Trouble seems to be mounting for former Minister and JD(S) leader H. D. Revanna. He has now been booked for kidnapping one of the alleged victims of sexual abuse by his son Prajwal Revanna, who is the MP of Hassan and the candidate of the BJP-led NDA in this Lok Sabha election.
05-04-25 12:21 pm
HK News Desk
Ankola Robbery, Talat gang: ಅಂಕೋಲಾದಲ್ಲಿ ನಗದು...
04-04-25 10:54 pm
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 01:16 pm
Mangaluru Staff
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm