ಬ್ರೇಕಿಂಗ್ ನ್ಯೂಸ್
03-05-24 09:06 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜೆಡಿಎಸ್ ಪಕ್ಷದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆಯೊಬ್ಬರು ದೂರು ನೀಡಿದ್ದು ಗನ್ ಪಾಯಿಂಟ್ ಇಟ್ಟು ನನ್ನನ್ನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಬೆಂಗಳೂರಿನ ಸಿಐಡಿ ಠಾಣೆಗೆ ದೂರು ನೀಡಿರುವ 44 ವರ್ಷದ ಮಹಿಳೆ ಕೃತ್ಯದ ಬಗ್ಗೆ ವಿವರಿಸಿದ್ದಾರೆ.
ಮಹಿಳೆ ದೂರು ಆಧರಿಸಿ ಅತ್ಯಾಚಾರ ಆರೋಪದಡಿ ಸಿಐಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜನರ ಕೆಲಸಗಳನ್ನು ಮಾಡಿಸುವುದಕ್ಕಾಗಿ ಶಾಸಕ ಹಾಗೂ ಸಂಸದರ ಬಳಿ ಹೋಗುತ್ತಿದ್ದೆ. ಕೆಲ ತಿಂಗಳ ಹಿಂದೆಯಷ್ಟೇ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಕಚೇರಿ ಹಾಗೂ ಕ್ವಾಟ್ರರ್ಸ್ಗೆ ಹೋಗಿದ್ದೆ. ಮೊದಲ ದಿನ ಹೋದಾಗ ಪ್ರಜ್ವಲ್ ಇರಲಿಲ್ಲ. ಮರುದಿನ ಬರುವಂತೆ ಹೇಳಿದ್ದರು. ಮರುದಿನ ಸಂಸದ ಪ್ರಜ್ವಲ್ ಕ್ವಾರ್ಟರ್ಸ್ಗೆ ಹೋಗಿದ್ದೆ. ಅಲ್ಲಿಂದ ಪ್ರಜ್ವಲ್ ಕಡೆಯವರು ನನ್ನನ್ನು ಮೊದಲ ಮಹಡಿಗೆ ಕಳುಹಿಸಿದ್ದರು. ಅಲ್ಲಿಯೂ ಕೆಲ ಮಹಿಳೆಯರು ಇದ್ದರು. ಸ್ಥಳಕ್ಕೆ ಬಂದಿದ್ದ ಪ್ರಜ್ವಲ್, ಇತರೆ ಮಹಿಳೆಯರನ್ನು ಮಾತನಾಡಿಸಿ ವಾಪಸು ಕಳುಹಿಸಿದ್ದರು. ನಾನು ಒಬ್ಬಳೇ ಉಳಿದುಕೊಂಡಿದ್ದೆ. ಎಲ್ಲರೂ ಹೋದ ನಂತರ, ನನ್ನ ಕೈ ಹಿಡಿದು, ಕೊಠಡಿಯೊಳಕ್ಕೆ ಎಳೆದೊಯ್ದಿದ್ದರು. ಕೊಠಡಿ ಬಾಗಿಲು ಹಾಕಿ ಒಳಗಿನಿಂದ ಲಾಕ್ ಮಾಡಿದ್ದರು. ಲಾಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಏನೂ ಮಾಡೋದಿಲ್ಲ ಎಂದಿದ್ದರು.
‘ನಿನ್ನ ಪತಿಯಿಂದಾಗಿ ತಾಯಿಗೆ ಎಂಎಲ್ಎ ಟಿಕೆಟ್ ತಪ್ಪಿತೆಂದು ಹೇಳಿದ್ದರು. ನಂತರ, ನನಗೆ ಬಟ್ಟೆ ಬಿಚ್ಚುವಂತೆ ಹಾಗೂ ಮಂಚದ ಮೇಲೆ ಮಲಗುವಂತೆ ಒತ್ತಾಯಿಸಿದ್ದರು. ಅದಕ್ಕೆ ಒಪ್ಪದಿದ್ದಾಗ, ‘ನನ್ನ ಬಳಿ ಗನ್ ಇದೆ. ಹೇಳಿದಂತೆ ಕೇಳದಿದ್ದರೆ, ನಿನ್ನನ್ನು ಹಾಗೂ ನಿನ್ನ ಪತಿಯನ್ನು ಮುಗಿಸುತ್ತೇನೆ ಎಂದು ಪ್ರಜ್ವಲ್ ಬೆದರಿಸಿದ್ದರು. ಆತನಿಂದ ಬಿಡಿಸಿಕೊಳ್ಳಲು ಯತ್ನಿಸಿದ್ದೆ. ಆದರೆ, ಕೈಗಳನ್ನು ಬಿಗಿಯಾಗಿ ಹಿಡಿದು ನನ್ನ ಬಟ್ಟೆಗಳನ್ನು ಒತ್ತಾಯದಿಂದ ಬಿಚ್ಚಿಸಿದ್ದ. ಕೂಗುತ್ತೇನೆ ಎಂದಾಗ, ತನ್ನ ಮೊಬೈಲ್ ತೆಗೆದು ಚಿತ್ರೀಕರಣ ಮಾಡಿಕೊಂಡಿದ್ದ. ಅದೇ ವಿಡಿಯೊ ನನಗೆ ತೋರಿಸಿ, ‘ನೀನು ನಾನು ಹೇಳಿದಂತೆ ಕೇಳದಿದ್ದರೆ, ವಿಡಿಯೋವನ್ನು ಎಲ್ಲರಿಗೂ ತೋರಿಸಿ ನಿನ್ನ ಮರ್ಯಾದೆ ಕಳೆಯುತ್ತೇನೆ ಎಂದು ಪ್ರಜ್ವಲ್ ಬ್ಲ್ಯಾಕ್ಮೇಲ್ ಮಾಡಿದ್ದರು ಎಂಬುದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ವಿಡಿಯೊ ಮುಂದಿಟ್ಟು ಪ್ರಜ್ವಲ್ ಹಲವು ಬಾರಿ ನನ್ನನ್ನು ಒತ್ತಾಯದಿಂದ ತಮ್ಮ ಕ್ವಾರ್ಟರ್ಸ್ಗೆ ಪದೇ ಪದೇ ಕರೆಸಿ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ, ಆಗಾಗ ವಿಡಿಯೊ ಕರೆ ಮಾಡಿ ಬಟ್ಟೆ ಬಿಚ್ಚುವಂತೆ ಪೀಡಿಸುತ್ತಿದ್ದರು. ವಿಡಿಯೋ ಬ್ಲ್ಯಾಕ್ಮೇಲ್ ಹಾಗೂ ಪತಿಯನ್ನು ಕೊಲ್ಲುವ ಬೆದರಿಕೆಯೊಡ್ಡಿದ್ದರಿಂದ, ಪ್ರಜ್ವಲ್ ಹೇಳಿದಂತೆ ಇಷ್ಟು ದಿನ ಕೇಳಿದ್ದೆ. ಇದೀಗ, ಪ್ರಜ್ವಲ್ ವಿರುದ್ಧ ಎಸ್ಐಟಿ ತನಿಖೆ ನಡೆಯುತ್ತಿದೆ. ಹೀಗಾಗಿ, ಎಸ್ಐಟಿ ಎದುರು ಹಾಜರಾಗಿ ಹೇಳಿಕೆ ಕೊಟ್ಟು, ದೂರು ನೀಡುತ್ತಿದ್ದೇನೆ. ನನ್ನ ಮೇಲೆ ಪದೇ ಪದೇ ಅತ್ಯಾಚಾರ ಎಸಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳೆ ಒತ್ತಾಯಿಸಿದ್ದಾರೆ.
Prajwal Revanna sex case, JDS Members says I was raped in gunpoint by Prajwal. He used to record all the videos says 44 year old women who has filed a case of rape against prajwal
05-04-25 12:21 pm
HK News Desk
Ankola Robbery, Talat gang: ಅಂಕೋಲಾದಲ್ಲಿ ನಗದು...
04-04-25 10:54 pm
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 01:16 pm
Mangaluru Staff
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm