ಬ್ರೇಕಿಂಗ್ ನ್ಯೂಸ್
03-05-24 10:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.3: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಒಂದರ ಮೇಲೊಂದು ಕೇಸು ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ತೀವ್ರ ಸಂಕಷ್ಟಕ್ಕೆ ತುತ್ತಾಗುತ್ತಲೇ ಯಾರ ಕೈಗೂ ಸಿಗದೇ ತಲೆಮರೆಸಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಹಾಸನ ಮತ್ತು ಬೆಂಗಳೂರಿನ ಮನೆಗಳಿಗೆ ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಅಧಿಕಾರಿಗಳು ಬಂಧಿಸುತ್ತಾರೆಂಬ ಭೀತಿಯಲ್ಲಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ.
ಅತ್ಯಾಚಾರ, ಅಪಹರಣ, ಕಿರುಕುಳ ಆರೋಪದಲ್ಲಿ ತಂದೆ, ಮಗನ ವಿರುದ್ಧ ನಾಲ್ಕು ಪ್ರಕರಣ ದಾಖಲಾಗಿದ್ದು ಎಸ್ಐಟಿ ತನಿಖೆಗೆ ಮಹತ್ತರ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ವಿಡಿಯೋ ಪ್ರಕರಣ ಕುರಿತಂತೆ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ವಿಚಾರಣೆ ಮಾಡಲು ಎಸ್ಐಟಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಸಾಕಷ್ಟು ಮಾಹಿತಿ, ಸಾಕ್ಷ್ಯಗಳನ್ನೂ ಕಲೆಹಾಕಿದ್ದಾರೆ. ಈಗಾಗಲೇ ಎಸ್ಐಟಿ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರೂ, ರೇವಣ್ಣ ವಿಚಾರಣೆಗೆ ಬರದೆ ದೂರ ನಿಂತಿದ್ದಾರೆ.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿರುವುದರಿಂದ ಅವರ ವಿರುದ್ಧ ಲುಕೌಟ್ ನೋಟೀಸ್ ಜಾರಿಯಾಗಿದೆ. ಇದೀಗ ಎಚ್.ಡಿ. ರೇವಣ್ಣ ಕೂಡ ವಿದೇಶಕ್ಕೆ ಪರಾರಿಯಾಗುತ್ತಾರೆ ಎಂಬ ಮುನ್ಸೂಚನೆ ಸಿಕ್ಕ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಲುಕ್ ಔಟ್ ನೋಟೀಸ್ ಜಾರಿ ಮಾಡಲಾಗಿದೆ. ಎರಡನೇ ಪ್ರಕರಣ ದಾಖಲಾಗುತ್ತಲೇ ರೇವಣ್ಣ ತಲೆಮರೆಸಿಕೊಂಡಿದ್ದು, ಎಲ್ಲಿಯೂ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಇದೇ ವೇಳೆ, ವಿಚಾರಣೆಗೆ ಬರದಿದ್ದರೆ ರೇವಣ್ಣ ಅವರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿರುವುದು ಆರೋಪಿಗಳಿಗೆ ಬಿಸಿ ಮುಟ್ಟಿಸಿದೆ.
ಮೈಸೂರಿನಲ್ಲಿದ್ದ ಮನೆ ಕೆಲಸದಾಕೆಯನ್ನು ಭವಾನಿ ರೇವಣ್ಣ ಅವರ ಆಪ್ತ ಸತೀಶ್ ಬಾಬು ಎಂಬಾತ ಅಪಹರಿಸಿರುವ ಬಗ್ಗೆಯೂ ಮೈಸೂರು ಜಿಲ್ಲೆಯ ಕೆ.ಆರ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಮಗನೇ ದೂರು ನೀಡಿದ್ದು, ಅಶ್ಲೀಲ ವಿಡಿಯೋದಲ್ಲಿ ತಾಯಿಯದ್ದೂ ಇದೆ. ಮೇ 1ರಂದು ಸತೀಶ್ ಬಾಬು ಮೈಸೂರಿಗೆ ಬಂದು ಭವಾನಿ ರೇವಣ್ಣ ಕರೆದುಕೊಂಡು ಬರಲು ಹೇಳಿದ್ದಾರೆಂದು ತಿಳಿಸಿ ತನ್ನ ತಾಯಿಯನ್ನು ಕರೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಹಿಂದೆ ಐದು ವರ್ಷಗಳ ಕಾಲ ಹೊಳೆನರಸೀಪುರದಲ್ಲಿದ್ದಾಗ ಮಹಿಳೆ ರೇವಣ್ಣ ಮನೆಯಲ್ಲಿ ಮನೆ ಕೆಲಸ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧಿಸಿ ಪೊಲೀಸರು ಸತೀಶ್ ಬಾಬುವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Sex scandal case, HD Revanna chances of flying abroad, lookout notice issued.
05-04-25 12:21 pm
HK News Desk
Ankola Robbery, Talat gang: ಅಂಕೋಲಾದಲ್ಲಿ ನಗದು...
04-04-25 10:54 pm
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 01:16 pm
Mangaluru Staff
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm