ಬ್ರೇಕಿಂಗ್ ನ್ಯೂಸ್
07-05-24 12:43 pm HK News Desk ಕರ್ನಾಟಕ
ಬೆಳಗಾವಿ, ಮೇ 07: ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆಡಿಯೋ ಸುತ್ತು ಹಾಕಿಕೊಂಡಿದೆ. ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ನನ್ನ ಬಳಿ ಸಾಕ್ಷಿ ಇವೆ. ಈ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿರುವ ಬಗ್ಗೆ ನೇರವಾಗಿ ಸಾಕ್ಷಿಯಿದೆ. ಅವರ ಬಳಿ ಅಲ್ಲಿ ಇಲ್ಲಿ ಅಂತಾ ಸುತ್ತು ಹಾಕಿರುವುದು ಇದೆ. ನನ್ನ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಮಾತಾಡಿದ್ದು ಇದೆ ಅದನ್ನು ಕೊಡ್ತೇನಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಗೋಕಾಕನಲ್ಲಿ ಮಾತನಾಡಿದ ಅವರು, ಡಿಕೆಶಿ ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದು ಸಾಕ್ಷ್ಯ ಇದೆ ಆದರೆ ಅದನ್ನು ಮಾಧ್ಯಮದ ಮುಂದೆ ಕೊಡಲ್ಲ. ಸಿಬಿಐಗೆ ಕೇಸ್ ಕೊಟ್ಟರೆ ಸಾಕ್ಷಿ ಕೊಡ್ತೇನಿ. ನನ್ನ ಕೇಸ್ ನಲ್ಲೂ ಎಸ್ಐಟಿ ವಿಶ್ವಾಸ ಇಲ್ಲಾ, ಈಗಲೂ ಎಸ್ಐಟಿ ಮೇಲೆ ವಿಶ್ವಾಸ ಇಲ್ಲ ಎಂದರು.
ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು. ಮಹಾನ್ ನಾಯಕ ಹಣದಲ್ಲಿ ಬಹಳಷ್ಟು ಪ್ರಭಾವಿ ಇದ್ದಾರೆ. ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬಹುದು ಎನ್ನುವ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ ಈ ಕೇಸ್ ನಲ್ಲಿ ಫಿಕ್ಸ್ ಆಗಬೇಕು. ನನ್ನ ಕೇಸ್ ನಲ್ಲಿ ಕೇವಲ ಡಿಕೆ ಶಿವಕುಮಾರ್ ಭಾಗಿಯಾಗಿಲ್ಲ. ನಮ್ಮವರೂ ಕೇಸ್ ನಲ್ಲಿ ಇದ್ದಾರೆ ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದರು.
ಸತತ ನಾಲ್ಕು ವರ್ಷದಿಂದ ಕೊಷನ್ ಮಾರ್ಕ್ ಇದೆ. ಇದೆಲ್ಲದಕ್ಕೂ ಜೂನ್ 4ರ ನಂತರ ಇತಿಶ್ರೀ ಹಾಡೋಣ ಎಂದರು.
ಪ್ರಜ್ವಲ್ ರೇವಣ್ಣ ಕೇಸ್ ಯಾರು ಹೆಮ್ಮೆ ಪಡುವ ವಿಷಯ ಅಲ್ಲ. ಎಲ್ಲರೂ ತಲೆ ತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ. ರೇವಣ್ಣ ಕಾನೂನು ರೀತಿ ಹೋರಾಟ ಮಾಡಲಿ. ಕಾನೂನು ಒಂದೇ ಅದಕ್ಕೆ ಉತ್ತರ ಎಂದು ಹೇಳಿದರು.
ಸಿದ್ದರಾಮಯ್ಯ ಮತ್ತು ಪರಮೇಶ್ವರ ಅವರದ್ದು ಸಿಡಿ ಮುಂದೆ ಬರಬಹುದು. ಮೊದಲಿನಿಂದ ಸಿಡಿ ವಿಚಾರದ ಕುರಿತು ಪದೇ ಪದೇ ಹೇಳಿಕೊಂಡು ಬಂದಿದ್ದೆ. ಆಗ ಎಲ್ಲರೂ ನನ್ನಾ ನೆಗ್ಲೆಟ್ ಮಾಡಿ ನಗುತ್ತಾ ಕೂತಿದ್ರು. ಇವತ್ತು ಒಬ್ಬರಿಗೆ ಆಗಿದೆ ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ ಅವರಿಗೂ ಬರಬಹುದು. ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇತಿಶ್ರೀ ಹಾಡಬೇಕು. ಸಿಎಂ ಅವರ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಹೇಳಿದರು.
Ramesh Jarkiholi says DK Shivakumar must be fixed in prajwal Revanna sex sc scandal as audio goes viral. Says even Siddaramaiah and home minister parameshwar CD might be released in the future.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm