ಬ್ರೇಕಿಂಗ್ ನ್ಯೂಸ್
11-05-24 02:11 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿದೆ. ಇದೇ ಪ್ರಕರಣದಲ್ಲಿ ಜೆಡಿಎಸ್ ನಾಯಕ ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ ಹಾಗೂ ಮಾಜಿ ಸಂಸದ ಶಿವರಾಮೇಗೌಡ ನಡುವಿನ ವಾಕ್ಸಮರವೂ ಜೋರಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, “ದೇವರಾಜೇಗೌಡ ಹುಚ್ಚು ನಾಯಿ ಇದ್ದಂತೆ. ಆತ ನಕಲಿ ವಕೀಲ” ಎಂದು ವಾಗ್ದಾಳಿ ನಡೆಸಿದ್ದಾರೆ.
ಏಪ್ರಿಲ್ 29 ಹಾಗೂ 30ರಂದು ನಾವು ಭೇಟಿ ಮಾಡಿ ಮಾತನಾಡಿದ್ದೇವೆ. ಏಪ್ರಿಲ್ 29ಕ್ಕೂ ಮೊದಲು ನಾನು ಭೇಟಿ ಮಾಡಿಲ್ಲ. ಏಪ್ರಿಲ್ 29ರ ಬಳಿಕ 30ನೇ ತಾರೀಖಿನಂದೂ ಅವನೇ ಬಂದು ಭೇಟಿ ಮಾಡಿದ್ದಾನೆ. ಆ ಎರಡು ಸಭೆ ಹೊರತುಪಡಿಸಿ ನಾನು ಅವನ ಜತೆ ಮಾತನಾಡಿಲ್ಲ. ಅವನೊಬ್ಬ ಹುಚ್ಚುನಾಯಿ, ನಕಲಿ ವಕೀಲ. ಅಲ್ಲದೆ, ಆತನೊಬ್ಬರ ರೋಲ್ ಕಾಲ್ ಮಾಸ್ಟರ್. ಅವನ ಹಣಕಾಸಿನ ವ್ಯವಹಾರದ ಬಗ್ಗೆ ಎಸ್ಐಟಿ ತನಿಖೆ ನಡೆಸಬೇಕು.

ಪೆನ್ಡ್ರೈವ್ ರಿಲೀಸ್ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ತಿಳಿಸಿದರು.
ದೇವರಾಜೇಗೌಡ ಖದೀಮ ಇದ್ದಾನೆ. ಪ್ರಚಾರ ಪ್ರಿಯನಾದ ಅವನಿಗೆ ಮಾಧ್ಯಮಗಳು ಆದ್ಯತೆ ನೀಡಬಾರದು. ಸಿಎಂ ಹಾಗೂ ಡಿಸಿಎಂ ಮೇಲೆ ನಂಬಿಕೆ ಇಲ್ಲ ಎಂದ. ಅಷ್ಟಕ್ಕೂ, ಅವನು ಬ್ಲ್ಯಾಕ್ಮೇಲ್ ಮಾಡಿ ದುಡ್ಡು ಮಾಡಿದ್ದಾನೆ. ಅವನು ವಕೀಲಿಕೆ ಮಾಡಲ್ಲ. ಇಷ್ಟಾದರೂ ಹೇಗೆ ದುಡ್ಡು ಬರುತ್ತದೆ? ವಿಧಾನಸಭೆ ಚುನಾವಣೆಯಲ್ಲಿ ದುಡ್ಡು ಇಟ್ಟುಕೊಂಡು ಸುಮ್ಮನಾದ. ಅವನ ಬಾಡಿಯಲ್ಲಿ ಯಾವಾಗಲೂ ಕ್ಯಾಮೆರಾ ಇರುತ್ತದೆ. ನಾವು ಕೂತಾಗ ಒಂದೂ ಮಾತಾಡಲ್ಲ. ನನಗೆ ಅವನ ಬಗ್ಗೆ ಭಯ ಇಲ್ಲ. ಎಸ್ಐಟಿ ಅವರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದರೆ ಎಲ್ಲವೂ ಬಯಲಾಗುತ್ತದೆ” ಎಂದು ಹೇಳಿದರು.
ಹಾಸನ ಪೆನ್ಡ್ರೈವ್ ಪ್ರಕರಣದಲ್ಲಿ ಸ್ಫೋಟಕ ಆಡಿಯೊ ಹೊರಬಿದ್ದಿದೆ. ಇತ್ತೀಚೆಗೆ ಈ ಹಗರಣದಲ್ಲಿ ಡಿಸಿಎಂ ಡಿಕೆಶಿ ಕೈವಾಡ ಎಂದು ಆರೋಪಿಸಿದ್ದ ವಕೀಲ ದೇವರಾಜೇಗೌಡ, ಮತ್ತೊಂದು ಆಡಿಯೊ ಬಾಂಬ್ ಹಾಕಿದ್ದಾರೆ. ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್ ಆಡಿಯೊ ವೈರಲ್ ಆಗಿದೆ. ಇದರ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆಡಿಯೊ ಬಯಲಾದ ಬೆನ್ನಲ್ಲೇ ಈಗ ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿ ಹಲವು ಆರೋಪ ಮಾಡಿದ್ದಾರೆ.
Devaraje Gowda arrested, Shivarame gowda says hes a mad dog, blackmailer, roll call master. Says he goes everywhere having a body camera. According to police, Devaraje Gowda, an advocate, was arrested for allegedly leaking the video. He was caught at Gulihal toll gate in Chitradurga district after a tip-off from the Hassan Police, who wanted his presence for the case.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm