ಬ್ರೇಕಿಂಗ್ ನ್ಯೂಸ್
11-05-24 05:20 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ವಿಧಾನ ಪರಿಷತ್ತಿಗೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯೇ ಮುಂದುವರಿಯುವುದು ಖಚಿತವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಅವರೇ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರು ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ಹಾಗೂ ಜೆಡಿಎಸ್ಸಿಗೆ ಎರಡು ಸ್ಥಾನ ಹಂಚಿಕೆಯಾಗಲಿದೆ.
ಲೋಕಸಭೆ ಚುನಾವಣೆ ಪೂರ್ವದಲ್ಲಿ ಜೆಡಿಎಸ್, ಎನ್ ಡಿಎ ಮೈತ್ರಿಕೂಟ ಸೇರಿದ ಬೆನ್ನಲ್ಲೇ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯಲ್ಲಿ 4-3 ಸ್ಥಾನಗಳ ಹಂಚಿಕೆ ಬಗ್ಗೆ ನಿರ್ಧಾರವಾಗಿತ್ತು. ರಾಷ್ಟ್ರೀಯ ನಾಯಕರ ಮಟ್ಟದಲ್ಲಿ ಆಗಿರುವ ನಿರ್ಧಾರದಂತೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ಸಿನ ಎಪಿ ರಂಗನಾಥ್ ಸ್ಪರ್ಧಿಸಿ ಸೋಲು ಕಂಡಿದ್ದರು. ಈಗ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ತಲಾ ಮೂರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಮೈತ್ರಿ ಪ್ರಕಾರ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಜೆಡಿಎಸ್ಸಿನ ಎಸ್.ಎಲ್. ಭೋಜೇಗೌಡ ಅವರೇ ಅಭ್ಯರ್ಥಿಯಾಗೋದು ಖಚಿತ. ಹಾಗೆಯೇ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನೂ ಜೆಡಿಎಸ್ ಪಡೆಯುವ ಸಾಧ್ಯತೆ ಇದ್ದು, ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಸೇರಿದಂತೆ ಕೆಲವರು ಆಕಾಂಕ್ಷಿಗಳಿದ್ದಾರೆ. ಬಿಜೆಪಿಯಿಂದ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಹೊಸಮುಖ ಎ.ಎಚ್.ಆನಂದ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ನಾರಾಯಣ ಸ್ವಾಮಿ, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ, ಮಾಜಿ ಶಾಸಕ ರಘುಪತಿ ಭಟ್, ವಿಕಾಸ್ ಪುತ್ತೂರು ಹೆಸರು ಮುಂಚೂಣಿಯಲ್ಲಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರ ಕರಾವಳಿಯ ಐದು ಜಿಲ್ಲೆಗಳನ್ನು ಒಳಗೊಂಡಿದ್ದು, ಬಿಜೆಪಿ ಪ್ರಾಬಲ್ಯದ ಕ್ಷೇತ್ರ. ಆದರೆ, ಈ ಕ್ಷೇತ್ರವನ್ನು ಜೆಡಿಎಸ್ಸಿಗೆ ಬಿಟ್ಟು ಕೊಡುವುದಕ್ಕೆ ಸ್ಥಳೀಯ ಬಿಜೆಪಿ ನಾಯಕರ ವಿರೋಧ ಇದೆ. ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋಜೇಗೌಡ ಬಗ್ಗೆ ವಿರೋಧಿ ಅಲೆಯಿದ್ದು, ಬಿಜೆಪಿಯಿಂದ ಬಹುತೇಕ ಬಂಡಾಯ ಅಭ್ಯರ್ಥಿ ಸ್ಪರ್ಧಿಸುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಪ್ರಾಬಲ್ಯ ಹೊಂದಿರುವ ಮಾಜಿ ಶಾಸಕ ಸಿಟಿ ರವಿ ಬಹಿರಂಗವಾಗಿಯೇ ಭೋಜೇಗೌಡರ ಬಗ್ಗೆ ವಿರೋಧಿ ನಿಲುವು ಹೊಂದಿದ್ದು, ಜೆಡಿಎಸ್ ಗೆಲುವು ಈ ಕ್ಷೇತ್ರದಲ್ಲಿ ಸುಲಭ ಇಲ್ಲ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮುರಿದುಕೊಳ್ಳಬೇಕು ಎನ್ನುವ ನಿಲುವು ಈ ಭಾಗದ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರಲ್ಲಿದ್ದು ಚುನಾವಣೆಯಲ್ಲಿ ಪ್ರಭಾವ ಬೀರಲಿದೆ.
Former Chief Minister BS Yediyurappa has confirmed that the BJP-JD(S) alliance will continue in the elections to the Legislative Council from the teachers' and graduates' constituencies.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm