ಬ್ರೇಕಿಂಗ್ ನ್ಯೂಸ್
11-05-24 07:25 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.11: ಕರ್ನಾಟಕ ಹೈಕೋರ್ಟ್ ನಲ್ಲಿ ವಕೀಲರಾಗಿದ್ದ ಚೈತ್ರಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಸಂಜಯನಗರ ಬಳಿಯಿರುವ ಅಣ್ಣಯ್ಯ ಲೇಔಟ್ ನಲ್ಲಿ ನಡೆದಿದೆ.
ಚೈತ್ರಾ ಅವರ ಪತಿ ಕೆಎಎಸ್ ಅಧಿಕಾರಿಯಾಗಿದ್ದು, ಯಾರೂ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೇಳಲಾಗಿದೆ. ಅವರ ಶವ ಮನೆಯ ಫ್ಯಾನೊಂದಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಶವದ ಬಳಿ ಡೆತ್ ನೋಟ್ ಸಿಕ್ಕಿದ್ದು ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ನಡೆದಾಗ ಶಿವಕುಮಾರ್ ಅವರು ಹೊರಗಡೆ ಹೋಗಿದ್ದರು. ಅವರು ಪುನಃ ಮನೆಗೆ ಹಿಂದಿರುಗಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕೆಐಡಿಬಿಯಲ್ಲಿ ಉಪವಿಭಾಗಾಧಿಕಾರಿ ಆಗಿರುವ ಶಿವಕುಮಾರ್ ಅವರು, 2016ರಲ್ಲಿ ಚೈತ್ರಾ ಅವರನ್ನು ವಿವಾಹವಾಗಿದ್ದರು. ಅವರಿಗೆ ಐದು ವರ್ಷದ ಮಗಳು ಇದ್ದಾಳೆ.
ಆತ್ಮಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಸಂಜಯ್ ನಗರ ಪೊಲೀಸರು, ಮೃತದೇಹವನ್ನು ರಾಮಯ್ಯ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.
ಚೈತ್ರಾ ಅವರ ಮೃತದೇಹದ ಪಕ್ಕ ಸಿಕ್ಕಿರುವ ಡೆತ್ ನೋಟ್ ನಲ್ಲಿ ನನಗೆ ಜೀವನ ಸಾಕಾಗಿದೆ. I am just leaving ಎಂದು ಬರೆಯಲಾಗಿದೆ. ಅದರಲ್ಲಿ ಪತಿಯ ವಿರುದ್ಧವಾಗಲೀ ಅಥವಾ ಮತ್ಯಾರದ್ದೇ ವಿರುದ್ಧವಾಗಲೀ ದೂರಿಲ್ಲ. ಆದರೂ, ಪೊಲೀಸರು ಮನೆಯ ಸದಸ್ಯರನ್ನು ವಿಚಾರಣೆ ನಡೆಸಿದ್ದಾರೆ
ಡೆತ್ ನೋಟ್ ನಲ್ಲಿ ಅವರು, "ನಾನು ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ಆದರೆ, ಅದರಿಂದ ಆಚೆ ಬರಲು ನಾನು ಪ್ರಯತ್ನ ನಡೆಸಿದ್ದು, ಅದು ಸಾಧ್ಯವಾಗಲಿಲ್ಲ. ಹಾಗಾಗಿ, ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ಲೈಫ್ ಎಂಜಾಯ್ ಮಾಡಿ ಹೇಳಿದ್ದಾರೆಂದು ಚೈತ್ರಾ ಬರೆದಿದ್ದಾರೆ'' ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Lawyer, wife of KAS officer shivakumar Chaitra commits suicide in Bangalore. The deceased, identified as Chaitra, was the wife of KAS officer Shivakumar, who serves as a Sub Divisional Officer in the Karnataka Industrial Development Board (KIDB). A death note has been found and police are now investigating the case.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm