ಬ್ರೇಕಿಂಗ್ ನ್ಯೂಸ್
13-05-24 04:34 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13: ಅಶ್ಲೀಲ ಪೆನ್ಡ್ರೈವ್ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ 15 ರಂದು ಜರ್ಮನಿಯಿಂದ ಬೆಂಗಳೂರಿಗೆ ಹಿಂತಿರುಗಲು ಕಾಯ್ದಿರಿಸಿದ್ದ ವಿಮಾನದ ಟಿಕೆಟನ್ನು ದಿಢೀರ್ ರದ್ದುಗೊಳಿಸಿದ್ದು ಬಂಧನದ ನಿರೀಕ್ಷೆ ಇಟ್ಟುಕೊಂಡಿದ್ದ ಎಸ್ಐಟಿ ತಂಡವನ್ನು ತಬ್ಬಿಬ್ಬುಗೊಳಿಸಿದ್ದಾರೆ.
ಈವರೆಗೂ ಮೇ 15ರ ವಿಮಾನ ಟಿಕೆಟ್ ಬುಕ್ ಆಗಿದ್ದರಿಂದ ಇನ್ನೆರಡು ದಿನದಲ್ಲಿ ಬರಬಹುದು ಎಂಬ ನಿರೀಕ್ಷೆ ಇತ್ತು. ಹಾಗಿದ್ದರೂ ಎಸ್ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ಪ್ರಜ್ವಲ್ ವಿದೇಶದಲ್ಲಿ ಅಡಗಿರುವ ಜಾಗವನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದೆ ಮೇ 3ರಂದು ನಿಗದಿಯಾಗಿದ್ದ ವಿಮಾನದ ಟಿಕೆಟನ್ನು ಮೇ 15ಕ್ಕೆ ಮುಂದೂಡಿದ್ದರು. ಈಗ ಎರಡು ದಿನ ಇರುವಾಗ ಟಿಕೆಟ್ ರದ್ದುಗೊಳಿಸಿದ್ದು ಎಸ್ಐಟಿ ತಂಡವನ್ನು ದಿಕ್ಕು ತಪ್ಪಿಸಲು ಪ್ರಜ್ವಲ್ ಈ ರೀತಿ ಮಾಡುತ್ತಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆ ನೋಡಿದರೆ, ಪ್ರಜ್ವಲ್ ಸದ್ಯ ಬೆಂಗಳೂರಿಗೆ ವಾಪಸಾಗುವುದು ಅನುಮಾನ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವ ಮುನ್ನವೇ ಪ್ರಜ್ವಲ್ ಜರ್ಮನಿಗೆ ಹಾರಿದ್ದರು. ಆನಂತರ, ಬೇರೆ ದೇಶಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ ಯಾವ ದೇಶದಲ್ಲಿ ಅಡಗಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಬ್ಲೂ ಕಾರ್ನರ್ ನೋಟಿಸ್ ಜಾರಿಗೊಳಿಸಿದ್ದರೂ ಪ್ರಜ್ವಲ್ ವಿಮಾನ, ಹಡಗಿನಲ್ಲಿ ಪ್ರಯಾಣಿಸದ ಹೊರತು ಎಲ್ಲಿದ್ದಾರೆಂಬ ಬಗ್ಗೆ ಸಣ್ಣ ಸುಳಿವು ಕೂಡ ಎಸ್ಐಟಿಗೆ ಸಿಗಲ್ಲ. ಸದ್ಯಕ್ಕೆ ವಿದೇಶದಲ್ಲಿ ಇರುವುದರಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸುವುದೇ ಎಸ್ಐಟಿಗೆ ಸವಾಲಾಗಿದೆ.
Prajwal Revanna, an accused in the pornographic pen drive case, has suddenly cancelled the ticket of a flight he had booked to return to Bengaluru from Germany on May 15, much to the consternation of the SIT team that was expecting his arrest.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm