ಬ್ರೇಕಿಂಗ್ ನ್ಯೂಸ್
16-05-24 10:37 pm HK News Desk ಕರ್ನಾಟಕ
ಮೈಸೂರು, ಮೇ 16: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಎಂಎಲ್ಸಿ ಶ್ರೀಕಂಠೇಗೌಡ ಗುರುವಾರ ಪಕ್ಷೇತರವಾಗಿ ನಾಮಪತ್ರ ಸಲ್ಲಿಸಲು ಮುಂದಾಗಿದ್ದರು. ಆದರೆ, ಅದಕ್ಕೂ ಮುನ್ನ ಬೆಂಬಲಿಗರ ಸಭೆ ಕರೆದು ಎಳೆದಾಟ ಉಂಟಾಗಿ ಆಸ್ಪತ್ರೆ ಸೇರಿದ ಘಟನೆ ನಡೆಯಿತು. ಇದರಿಂದಾಗಿ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ.
ವಿಧಾನ ಪರಿಷತ್ತಿನ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಉದ್ಯಮಿ ವಿವೇಕಾನಂದ ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಬಿ ಫಾರಂ ನೀಡಿದ್ದರು. ಇದರಿಂದ ಜೆಡಿಎಸ್ ನಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಶ್ರೀಕಂಠೇಗೌಡ ತೀವ್ರ ಬೇಸರಗೊಂಡು ಬಂಡಾಯ ಸ್ಪರ್ಧಿಸಲು ಮುಂದಾಗಿದ್ದರು. ಇದಕ್ಕೆ ಸಂಬಂಧಿಸಿ ಮೈಸೂರಿನ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದಿದ್ದ ಗೌಡರು, ಪಕ್ಷೇತರ ಸ್ಪರ್ಧೆಯ ಬಗ್ಗೆ ಹೇಳಿಕೆ ನೀಡಿದ್ದರು.

ಇದೇ ವೇಳೆ, ಜೆಡಿಎಸ್ ಕಾರ್ಯಕರ್ತರು ಶ್ರೀಕಂಠೇಗೌಡ ನಿರ್ಧಾರವನ್ನು ವಿರೋಧಿಸಿದ್ದು, ಪಕ್ಷೇತರ ಸ್ಪರ್ಧೆ ಮಾಡದಂತೆ ಎಳೆದಾಡಿದ್ದಾರೆ. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದ್ದು, ಎಳೆದಾಟದಿಂದಾಗಿ ದೈಹಿಕವಾಗಿ ಬಳಲಿದಂತಾಗಿ ಗಾಯಗೊಂಡ ಶ್ರೀಕಂಠೇಗೌಡರನ್ನು ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರಿಂದ ಇತ್ತ ಬಂಡಾಯ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಮೇ 16 ಕಡೆಯ ದಿನವಾಗಿತ್ತು.
ವಿವೇಕಾನಂದ ಆಸ್ತಿ 124 ಕೋಟಿ
ಇದೇ ವೇಳೆ, ಜೆಡಿಎಸ್ ಬಿ ಫಾರಂ ಪಡೆದ ಉದ್ಯಮಿ ವಿವೇಕಾನಂದ ಮೈಸೂರಿನ ಪ್ರಾದೇಶಿಕ ಆಯುಕ್ತರಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಕುಟುಂಬದ ಒಟ್ಟು ಆಸ್ತಿ ಬರೋಬ್ಬರಿ 124.65 ಕೋಟಿ ಇದೆಯೆಂದು ಹೇಳಿಕೊಂಡಿದ್ದಾರೆ. ವಿವೇಕಾನಂದ ಬಳಿ 16.9 ಕೋಟಿ ಚರಾಸ್ತಿ ಇದೆ, ಒಂದು ಆಡಿ ಕಾರು, ಎರಡು ರಾಯಲ್ ಎನ್ ಫೀಲ್ಡ್ ಬೈಕ್ ಇದೆ. ಇವರ ಬಳಿ ಒಂದೂವರೆ ಕೇಜಿ ಚಿನ್ನ, 30 ಕೇಜಿ ಬೆಳ್ಳಿ ಇದೆ. ಇದೇ ವೇಳೆ, ಪತ್ನಿ ಬಳಿ 61 ಲಕ್ಷ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಒಂದು ಕೇಜಿ ಚಿನ್ನ, ಹತ್ತು ಕೇಜಿ ಬೆಳ್ಳಿ, ಮರ್ಸಿಡಿಸ್ ಬೆಂಜ್ ಕಾರನ್ನು ಹೊಂದಿದ್ದಾರೆ. ಇದಲ್ಲದೆ, ವಿವೇಕಾನಂದ ಬಳಿ ನೂರು ಕೋಟಿ ಮೌಲ್ಯದ ಕೃಷಿ ಜಮೀನು, ಕಮರ್ಶಿಯಲ್ ಕಟ್ಟಡಗಳಿವೆ. ಬೆಂಗಳೂರು, ಮೈಸೂರಿನಲ್ಲಿ ಎರಡೆರಡು ವಾಸದ ಮನೆಗಳಿವೆ.
Disgruntled JD(S) leader and former MLC K.T. Srikantegowda called for a meeting of his supporters after being denied the ticket to contest. The Constituency, spanning Mysuru, Mandya, Hassan and Chamarajanagar districts, has over 20,000 voters.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
20-04-26 09:40 pm
HK News Staffer
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
20-04-26 09:35 pm
HK News Staffer
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm