ಬ್ರೇಕಿಂಗ್ ನ್ಯೂಸ್
17-05-24 12:30 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.17: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಹತ್ಯೆಯ ಆರೋಪಿಯನ್ನು ಗುರುವಾರ ತಡರಾತ್ರಿ ಬಂಧಿಸಲಾಗಿದೆ. ಕೊಲೆ ಆರೋಪಿ ಗಿರೀಶ್ ಸಾವಂತ್ ನನ್ನ ದಾವಣಗೆರೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೇ ಪೊಲೀಸರ ಸಹಾಯದಿಂದ ಗಿರೀಶ್ನನ್ನು ಬಂಧಿಸಲಾಗಿದ್ದು, ಸದ್ಯ ಆತ ಕೋಮಾದಲ್ಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರೈಲಿನಿಂದ ಜಿಗಿದ ಆರೋಪಿಯನ್ನು ರೈಲ್ವೇ ಪೊಲೀಸರು ವಶಕ್ಕೆ ಪಡೆದು ಬಳಿಕ ಹುಬ್ಬಳ್ಳಿ-ಧಾರವಾಡ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಅಂಜಲಿ ಕೊಲೆ ಮಾಡಿದ್ದಲ್ಲದೇ ಮತ್ತೊಂದು ಕೊಲೆ ಮಾಡಲು ಹೋಗಿ ಕಿರಾತಕ ವಿಶ್ವ ಈಗ ಅರೆಸ್ಟ್ ಆಗಿದ್ದಾನೆ.\
ವಿಶ್ವ ಪರಾರಿಯಾಗಿ ದಾವಣಗೆರೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ರೈಲಿನಲ್ಲಿ ಮಹಿಳೆ ಜೊತೆ ಗಲಾಟೆ ಮಾಡಿ ಸಿಟ್ಟಾಗಿ ಚಾಕು ಹಾಕಲು ಮುಂದಾಗಿದ್ದ
ಈ ವಿಚಾರ ತಿಳಿಯುತ್ತಿದ್ದಂತೆ ಪ್ರಯಾಣಿಕರು ಆತನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದರು. ಜನರಿಂದ ತಪ್ಪಿಸಿಕೊಳ್ಳಲು ವಿಶ್ವ ರೈಲಿನಿಂದ ಜಿಗಿದಿದ್ದ. ಹಳಿಯಲ್ಲಿ ಬಿದ್ದು ಗಾಯಗೊಂಡಿದ್ದ ಈತನನ್ನು ದಾವಣಗೆರೆ ರೈಲ್ವೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ವೇಳೆ ವಿಶ್ವನ ವಿಳಾಸ ಇತ್ಯಾದಿ ಮಾಹಿತಿಗಳನ್ನು ಪರಿಶೀಲಿಸಿದಾಗ ಈತನೇ ಅಂಜಲಿಯನ್ನು ಕೊಲೆ ಮಾಡಿದ ಆರೋಪಿ ಎನ್ನುವುದು ಪೊಲೀಸರಿಗೆ ದೃಢಪಡುತ್ತದೆ. ಬಳಿಕ ಆತನನ್ನು ವಶಕ್ಕೆ ಪಡೆದ ಹುಬ್ಬಳ್ಳಿ - ಧಾರವಾಡ ಪೊಲೀಸರು ಹುಬ್ಬಳ್ಳಿಗೆ ಕರೆತಂದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಪ್ರತಿಕ್ರಿಯಿಸಿದ್ದು, ಬುಧವಾರ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಕೊಲೆ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗಾಗಿ ಎಂಟು ತಂಡವನ್ನು ನಾವು ರಚನೆ ಮಾಡಿದ್ದೇವು. ಗುರುವಾರ ರೈಲ್ವೇ ಪೊಲೀಸರ ಸಹಾಯದಿಂದ ಆರೋಪಿ ಸಿಕ್ಕಿದ್ದಾನೆ. ಆರೋಪಿ ಗಿರೀಶ್ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯವಾಗಿದೆ, ಸದ್ಯ ಕೋಮಾ ಸ್ಟೇಜ್ನಲ್ಲಿದ್ದಾನೆ ಎಂದು ಹೇಳಿದ್ದಾರೆ.
ಬೈಕ್ ಕಳ್ಳತನ ವಿಚಾರದಲ್ಲಿ ಗಿರೀಶ್ ಮೇಲೆ 4 ಪ್ರಕರಣಗಳು ದಾಖಲು ಆಗಿದ್ದವು. ಅವನು ಹೇಳುವ ಪ್ರಕಾರ ನಾವಿಬ್ಬರು ಪ್ರೀತಿ ಮಾಡ್ತಿದ್ವಿ, ಹುಡುಗಿ ನನ್ನ ಫೋನ್ ಅನ್ನು ಬ್ಲಾಕ್ ಮಾಡಿದ್ಲು ಅಂತಾ ಹೇಳ್ತಿದ್ದಾನೆ. ಅವನಿಗೆ ಪ್ರಜ್ಞೆ ಬಂದ ನಂತರ ಹೇಳಿಕೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
15 ಮೇ ಬುಧವಾರ ಬೆಳಗ್ಗೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂಜಲಿ ಎಂಬ ಯುವತಿಯ ಹತ್ಯೆಯಾಗಿತ್ತು. ಗಿರೀಶ್ ಎಂಬ ಯುವಕ ತನ್ನ ಪ್ರೀತಿಯನ್ನು ನಿರಾಕರಿಸಿದಳು ಎಂದು ಬೆಳ್ಳಂಬೆಳಗ್ಗೆಯೇ ಯುವತಿಯ ಮನೆಗೆ ನುಗ್ಗಿ ಮನಸೋ ಇಚ್ಛೇ ಚಾಕುವಿನಿಂದ ಇರಿದಿದ್ದ. ಈ ಹಿನ್ನೆಲೆ ತೀವ್ರ ರಕ್ತಸ್ರಾವದಿಂದ ಅಂಜಲಿ ಮೃತಪಟ್ಟಿದ್ದಳು.
Hubballi Anjali murder case, accused Vishwa has been arrested by Davangere police after he jumped from a moving train trying to stab a women. Passengers in the train thrahsed him during which he jumped from the train.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm