ಬ್ರೇಕಿಂಗ್ ನ್ಯೂಸ್
18-05-24 04:18 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.18: ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ.
ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ಸೋಮವಾರಪೇಟೆಯಿಂದ ಬೆಂಗಳೂರಿಗೆ ಬರುತ್ತಿತ್ತು. ನೆಲಮಂಗಲ ಸಮೀಪ ಬಂದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು, ಹೆದ್ದಾರಿಯ ತಡೆಗೋಡೆಯನ್ನು ಹಾರಿ ಪಕ್ಕದ ರಸ್ತೆಗೆ ಬಂದು ನಿಂತಿತ್ತು. ಇದು 40 ಅಡಿ ಎತ್ತರದ ಫ್ಲೈಓವರ್ನಲ್ಲಿ ಘಟನೆ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಒಂದು ವೇಳೆ ಬಸ್ ಏನಾದರೂ 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದರೆ, ಪ್ರಯಾಣಿಕರ ಜೀವಕ್ಕೆ ಕುತ್ತು ಬರುತ್ತಿತ್ತು. ಮಾತ್ರವಲ್ಲದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನ ಸವಾರರು ಪ್ರಾಣವನ್ನೇ ಕಳೆದುಕೊಳ್ಳಬೇಕಿತ್ತು.




ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. ಚಾಲಕ ನಿರ್ವಾಹಕ ಸೇರಿದಂತೆ ಆರು ಮಂದಿಗೆ ಗಾಯವಾಗಿದ್ದು, ಅವರನ್ನೆಲ್ಲ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕದ ರಸ್ತೆಗೆ ಹಾರಿದ್ದ ಬಸ್ ಅನ್ನು ತೆರವುಗೊಳಿಸುತ್ತಿದ್ದಾರೆ.
Ksrtc bus accident in Bangalore, bus climbs over bridge after driver looses control. Photos and videos of this has gone viral on social media. Six including driver and conducter have been injured.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm