ಬ್ರೇಕಿಂಗ್ ನ್ಯೂಸ್
23-05-24 05:29 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ.
ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ. ಇದು ಅವನಿಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ. ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಸಿದ್ದಾರೆ.
Former Prime Minister and Janata Dal (Secular) chief HD Deve Gowda issued a stern warning to his grandson and the accused in the sexual harassment case, Prajwal Revanna, to return to the country and surrender before the police. He said Revanna should be given the harshest punishment if the accusations against him turn out to be true.
17-01-26 08:02 pm
HK News Desk
ದೇವನಹಳ್ಳಿ - ಬೂದಿಗೆರೆ ರಸ್ತೆಯಲ್ಲಿ ಭೀಕರ ಅಪಘಾತ ; ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm