ಬ್ರೇಕಿಂಗ್ ನ್ಯೂಸ್
28-05-24 07:57 pm HK News Desk ಕರ್ನಾಟಕ
ಶಿವಮೊಗ್ಗ, ಮೇ.28: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಸಣ್ಣ ಪ್ರಾಯದಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು ಶಿವಮೊಗ್ಗ ಜಿಲ್ಲೆಯಲ್ಲಿ ಖ್ಯಾತ ಮಕ್ಕಳ ತಜ್ಞರಾಗಿ ಸಾವಿರಾರು ಮಂದಿಗೆ ದೃಷ್ಟಿಯಿತ್ತವರು.
ಉತ್ಕೃಷ್ಟ ಗುಣಮಟ್ಟದ ಸೇವೆ, ಕೈಗೆಟುಕುವ ದರದಲ್ಲಿ ರೋಗಿಗಳಿಗೆ ಒಂದೇ ಸೂರಿನಡಿ ಸರ್ವ ರೀತಿಯ ಆರೋಗ್ಯ ಸೇವೆ ನೀಡುವ ಡಾ.ಧನಂಜಯ ಸರ್ಜಿ ಶಿವಮೊಗ್ಗದಲ್ಲಿ ಸ್ಥಾಪಿಸಿದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಲೆನಾಡಿನಲ್ಲಿ ಮನೆಮಾತಾಗಿದೆ. ಖಾಸಗಿ ಆಸ್ಪತ್ರೆ ಗಳೆಂದರೆ ಬಿಲ್ ನೋಡುತ್ತಲೇ ರೋಗಿಯ ಎದೆ ಝಲ್ ಎನ್ನುತ್ತದೆ. ಆದರೆ, ಇದಕ್ಕೆ ತದ್ವಿರುದ್ಧ ಸರ್ಜಿ ಆಸ್ಪತ್ರೆ. 2014ರಲ್ಲಿ ಝೀರೋ ಬೆಡ್ ನಿಂದ ಆರಂಭಗೊಂಡ ಆಸ್ಪತ್ರೆ ಇಂದು 256 ಬೆಡ್ ಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ 'ಹೀರೋ' ಆಗಿ ಬೆಳೆದದ್ದು ಅಚ್ಚರಿಯ ಸಂಗತಿ.
ಸರಳ, ಸಜ್ಜನ, ಹಮ್ಮು ಬಿಮ್ಮು ಇಲ್ಲದ ಸಹೃದಯಿ ವ್ಯಕ್ತಿತ್ವದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ.ಧನಂಜಯ ಸರ್ಜಿ ಅವರು ಮೂಲತಃ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೊತ್ತೇನಹಳ್ಳಿ ಗ್ರಾಮದವರು. ಸರ್ಜಿ ರುದ್ರಪ್ಪ, ತಾಯಿ ರೇಣುಕಾ ಅವರ ಪುತ್ರ. ಇವರ ಎಲ್ಲ ಸಾಧನೆಯ ಹಿಂದೆ ಪತ್ನಿ, ಆಸ್ಪತ್ರೆಯ ನಿರ್ದೇಶಕರೂ ಆದ ನಮಿತಾ ಸರ್ಜಿ ಅವರ ಶ್ರಮವೂ ಇದೆ.
ದಾವಣಗೆರೆಯ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದವರು ಡಾ.ಧನಂಜಯ ಸರ್ಜಿ. ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸು ಈಗ ಸಾಕಾರಗೊಂಡಿದೆ. 2007ರ ಮಾರ್ಚ್ 18ರಂದು ಶಿವಮೊಗ್ಗದಲ್ಲಿ 'ಸರ್ಜಿ ಚೈಲ್ಡ್ ಕೇರ್ ಸೆಂಟರ್' ಮೂಲಕ ಇವರ ಸೇವೆ ಆರಂಭಗೊಂಡಿತ್ತು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳ ಸಂಬಳಕ್ಕೆ ಕೆಲಸ ಮಾಡಿದ್ದರು. 2014ರಲ್ಲಿ ಹೊಸ ಆಸ್ಪತ್ರೆ ಆರಂಭಿಸಿ, ಕೇವಲ 9 ವರ್ಷದಲ್ಲಿ 256 ಬೆಡ್ ವರೆಗೆ ತಲುಪಿದೆ.
ಜಿಲ್ಲಾಡಳಿತದಿಂದ ಪ್ರಶಂಸಾ ಪತ್ರ
ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 13 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸರ್ಜಿ ಆಸ್ಪತ್ರೆಯಲ್ಲಿ ಈ ಶಿಶುಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು ಜೀವ ಕಾಪಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಧನಂಜಯ ಸರ್ಜಿ ಅವರಿಗೆ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿತ್ತು.
ಇಂದು ಒಂದೇ ಸೂರಿನಡಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯದ ಆಸ್ಪತ್ರೆಯನ್ನಾಗಿಸಿದ್ದಾರೆ. ಕೈಗೆಟಕುವ ದರ, ಉತ್ಕೃಷ್ಟ ಹಾಗೂ ನಗುಮೊಗದ ವಿಶ್ವಾಸಾರ್ಹ ಸೇವೆಯೇ ಇವರ ಯಶಸ್ಸಿಗೆ ಕಾರಣ. ಈಗ ಅವರ ಆಸ್ಪತ್ರೆಗೆ ರಾಜ್ಯದ ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕರ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ನಿತ್ಯವೂ ನೂರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್ ಗಳು ಆಪರೇಷನ್ ಥಿಯೇಟರ್ ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ 1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಂಜೆತನ ನಿವಾರಣೆ ಹೆಜ್ಜೆ
ಬಂಜೆತನ ನಿವಾರಣೆಯಿಂದ ಹಿಡಿದು (preconception) ಭ್ರೂಣ ಹಂತದಲ್ಲಿರುವ ಶಿಶುವಿನಿಂದ ಹಿಡಿದು ಹಿರಿಯ ವಯಸ್ಕರ ವರೆಗೂ ಸರ್ವ ರೀತಿಯ ಆರೋಗ್ಯ ಸೇವೆ 'ಸರ್ಜಿ'ಯಲ್ಲಿ ಲಭ್ಯ. ಇದಲ್ಲದೆ, ಐವಿಎಫ್ ಸೆಂಟರ್ (ಬಂಜೆತನ ನಿವಾರಣಾ ಕೇಂದ್ರ) ಶೀಘ್ರವೇ ಆರಂಭವಾಗುತ್ತಿದೆ. ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಲ್ಲ ವಿಭಾಗದಲ್ಲಿ ಒಟ್ಟು 30 ಕನ್ಸಲ್ಟೆಂಟ್ ವೈದ್ಯರು ಇದ್ದಾರೆ. ಮತ್ತೊಂದು ವಿಶೇಷವೆಂದರೆ 12 ಭಾಷೆಗಳಲ್ಲಿ ಪ್ರಿಸ್ಕ್ರಿಪ್ಶನ್ ಸೌಲಭ್ಯವಿದ್ದು, ರೋಗಿಗಳಿಗೆ ಅನುಕೂಲವಾಗುವ ಭಾಷೆಯಲ್ಲಿ ವೈದ್ಯರು ಬರೆದುಕೊಡುವುದು ವಿಶೇಷ. ಜಿಲ್ಲೆಯ ಆರೋಗ್ಯ ಕ್ಷೇತ್ರದ ಇತಿಹಾಸದಲ್ಲಿ ಇಷ್ಟು ವೇಗವಾಗಿ ಅಭಿವೃದ್ಧಿಗೊಂಡ ಶ್ರೇಯಸ್ಸು ಸರ್ಜಿ ಆಸ್ಪತ್ರೆಗೆ ಸಲ್ಲುತ್ತದೆ.
160 ಮಕ್ಕಳ ದತ್ತು ಪಡೆದ ಸರ್ಜಿ
ಸಾಮಾಜಿಕ ಕಳಕಳಿ ಹೊಂದಿರುವ ಡಾ.ಧನಂಜಯ ಸರ್ಜಿ ಅವರು 2016ರಲ್ಲಿ ಮಕ್ಕಳ ದಿನಾಚರಣೆ ಸಂದರ್ಭ 160 ವಿಶೇಷ ಚೇತನ ಹಾಗೂ ಅನಾಥ ಮಕ್ಕಳನ್ನು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತು ಪಡೆದಿದ್ದಾರೆ. ಇತ್ತೀಚೆಗೆ 'ಸರ್ಜಿ ಫೌಂಡೇಷನ್' ಎಂಬ ದತ್ತು ಸಂಸ್ಥೆಯನ್ನು ಆರಂಭಿಸಿದ್ದಾರೆ. ಸಂಸ್ಥೆಯ ಮೂಲಕ ಆ ಎಲ್ಲ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ವಿಶೇಷ ಕಾಳಜಿ ವಹಿಸಿರುವುದು ಸರ್ಜಿ ಅವರ ಮಾನವೀಯ ಮೌಲ್ಯಕ್ಕೆ ಸಾಕ್ಷಿ. ಇದರೊಂದಿಗೆ 2 ಸಾವಿರ ಮಕ್ಕಳಿಗೆ ಉಚಿತವಾಗಿ ಟೈಫಾಯಿಡ್ ವ್ಯಾಕ್ಸಿನೇಷನ್ ನೀಡಿ ಜನಾನುರಾಗಿ ಎಂಬ ಹೆಸರು ಗಳಿಸಿದ್ದಾರೆ.
ಆಟೋ ಚಾಲಕರಿಗೆ ಹೆಲ್ತ್ ಕಾರ್ಡ್
ಆಯುಷ್ಮಾನ್ ಭಾರತ್ ಯೋಜನೆ ಅಡಿ ಸಾವಿರಾರು ಮಕ್ಕಳಿಗೆ ಚಿಕಿತ್ಸಾ ಸೌಲಭ್ಯ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ 3000 ಆಟೋ ಚಾಲಕರಿಗೆ ಸರ್ಜಿ ಆಸ್ಪತ್ರೆಯಿಂದ ಹೆಲ್ತ್ ಕಾರ್ಡ್ಗಳನ್ನು ನೀಡಿ ಅವರ ಆರೋಗ್ಯದ ಜೊತೆ ನಿಂತಿದೆ. ಅಲ್ಲದೇ ಪ್ರತಿ ತಿಂಗಳು ಉಚಿತ ಆರೋಗ್ಯ ಅರಿವು ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಕೊರೊನಾ ಕೈ ಮೀರಿದಾಗ ಯುನಿಟಿ ಆಸ್ಪತ್ರೆ ಸಹಯೋಗದಲ್ಲಿ ಸಹಾಯವಾಣಿ ಮೂಲಕವೂ ಸೇವೆ ಸಲ್ಲಿಸಲಾಗಿದೆ.
ಧನಂಜಯ ಸರ್ಜಿ ಕನಸು
ಕೇವಲ ಹಣವೇ ಮುಖ್ಯವಾಗಿರದೇ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಸೇವೆ ಜನರಿಗೆ ಲಭ್ಯವಾಗುವ ಮೂಲಕ ಶಿವಮೊಗ್ಗ ಒಂದು ದೊಡ್ಡ ಹೆಲ್ತ್ ಕ್ಲಬ್ ಆಗಬೇಕು. ಅಲ್ಲದೇ ಸರಕಾರ, ಮಹಾನಗರ ಪಾಲಿಕೆ ಆಸ್ಪತ್ರೆಗಳನ್ನು ತೆರೆಯುವ ಮೂಲಕ ರೋಗಿಗಳಿಗೆ ಸಂಜೀವಿನಿ ಆಗಬೇಕು ಎಂಬುದು ಧನಂಜಯ ಸರ್ಜಿಯವರ ಕನಸು. ಅಲ್ಲದೆ, ಪದವೀಧರರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಸಿಗುವಂತೆ ಸರ್ಕಾರದ ಮೂಲಕ ಈಡೆರೀಸಬೇಕೆಂಬುದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಗುರಿ ಇಟ್ಟುಕೊಂಡಿದ್ದಾರೆ. ಮತದಾರ ಪ್ರಭು ಆಶೀರ್ವದಿಸಿದರೆ ತನ್ನ ಜೀವನವನ್ನು ಸಮಾಜದಲ್ಲಿ ಹೆಚ್ಚು ಬಡವರಿಗಾಗಿ ಮೀಸಲಿಡಬೇಕೆಂಬುದು ಇವರ ಕನಸಾಗಿದೆ.
Shivamogga Dr Dhananjay Sarji Wikipedia, from zero to 256 bed own hospital success story. Dhananjay Sarji is a BJP-JDS alliance candidate for Vidhana Parishad South-West Graduate Constituency election
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:15 pm
Mangalore Correspondent
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am