ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm