ಬ್ರೇಕಿಂಗ್ ನ್ಯೂಸ್
02-06-24 07:51 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.2: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ಧರಾಮಯ್ಯಗೆ ಟಿಕೆಟ್ ನೀಡಲಾಗಿದೆ.
ನಾಮಪತ್ರ ಸಲ್ಲಿಸಲು ಕೊನೆ ದಿನಕ್ಕೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಮತ್ತು ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಿತ್ತು.
ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಮಾಡಿದ್ದು, ಎನ್.ಎಸ್. ಬೋಸರಾಜು, ವಸಂತ್ ಕುಮಾರ್, ಜಗದೇವ ಗುತ್ತೇದಾರ, ಡಾ.ಕೆ ಗೋವಿಂದರಾಜು, ಐವಾನ್ ಡಿಸೋಜ, ಶ್ರೀಮತಿ ಬಿಲ್ಕಿಸ್ ಬಾನೋ ಹಾಗೂ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂಬ ನಿರೀಕ್ಷೆಯಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಯತೀಂದ್ರ ಶಾಸಕರಾಗಿದ್ದರು. ಆದರೆ, ಕಳೆದ ಚುನಾವಣೆಯಲ್ಲಿ ಅದೇ ಕ್ಷೇತ್ರವನ್ನು ತಂದೆ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಡಲಾಗಿತ್ತು. ಇದೀಗ ವಿಧಾನ ಪರಿಷತ್ ಚುನಾವಣೆಗೆ ಪುತ್ರನಿಗೆ ಟಿಕೆಟ್ ಕೊಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ.
ಒಟ್ಟು 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಕಾಂಗ್ರೆಸ್ ಎಂಟು, ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್ ಕಡೆಯಿಂದ ಅಭ್ಯರ್ಥಿ ಹಾಕದೇ ಇದ್ದರೆ ಅವಿರೋಧ ಆಯ್ಕೆಯಾಗುವ ಸಾಧ್ಯತೆಯಿದೆ.
A day before the last date for filing nominations for the June 13 elections to the Karnataka Legislative Council, both the Congress and the BJP announced their lists of candidates on Sunday. The seven candidates announced by Congress are Science and Technology Minister N S Boseraju, state party working president Vasanth Kumar, Chief Minister Siddaramaiah’s son and former MLA Dr Yathindra, Siddaramaiah’s political secretary Dr K Govindaraj, former MLC Ivan D’Souza, former Karnataka State Minorities Commission chairperson Balkees Banu and the party’s Kalaburagi district president, Jagdev Guttedar.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:15 pm
Mangalore Correspondent
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am