ಬ್ರೇಕಿಂಗ್ ನ್ಯೂಸ್
03-06-24 10:34 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.03: ರೇವ್ ಪಾರ್ಟಿ ಪ್ರಕರಣದಲ್ಲಿ ಬಂಧನವಾಗಿದ್ದ ತೆಲುಗು ನಟಿ ಹೇಮಾ ಅವರಿಗೆ 12 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆನೇಕಲ್ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಸಲ್ಮಾ .ಎ.ಎಸ್ ಅವರು, ನಟಿ ಹೇಮಾಗೆ ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಮೇ 19ರಂದು ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿ ವಿರುದ್ಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ವೈದ್ಯಕೀಯ ತಪಾಸಣೆಯಲ್ಲಿ ನಟಿ ಹೇಮಾ ಸೇರಿ 86 ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ಸೋಮವಾರ ಸಂಜೆ ನಟಿ ಹೇಮಾ ಹಾಜರಾಗಿದ್ದರು. ಈ ವೇಳೆ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ರೇವ್ ಪಾರ್ಟಿಯಲ್ಲಿ ಮಾದಕ ವಸ್ತು ಸೇವಿಸಿದ ಹಿನ್ನೆಲೆಯಲ್ಲಿ ತೆಲುಗು ನಟಿ ಹೇಮಾ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ರಾತ್ರಿ ಆನೇಕಲ್ನ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶೆ ಅವರ ಮುಂದೆ ನಟಿಯನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶೆ, ನಟಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.
ಡ್ರಗ್ಸ್ ಮತ್ತು ರೇವ್ ಪಾರ್ಟಿ ಆಯೋಜನೆಯಲ್ಲಿ ನಟಿ ಪ್ರಮುಖ ಪಾತ್ರ ವಹಿಸಿದ್ದರು. ಹಾಗೆಯೇ ತಾವು ಬೇರೆ ಕಡೆ ಇರುವುದಾಗಿ ವಿಡಿಯೊ ಮಾಡಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದರಿಂದ ನಟಿಯನ್ನು ಬಂಧಿಸಲಾಗಿದೆ.
ನಾನೇನು ತಪ್ಪು ಮಾಡಿಲ್ಲ ;
ಕೋರ್ಟ್ಗೆ ಹಾಜರುಪಡಿಸುವಾಗ ನಟಿ ಹೇಮಾ ಮಾತನಾಡಿ, ನಾನೇನು ತಪ್ಪು ಮಾಡಿಲ್ಲ. ನಾನು ನಿಜವಾಗಿಯೂ ಹೈದರಾಬಾದ್ನಿಂದಲೇ ವಿಡಿಯೊ ಕಳುಹಿಸಿದ್ದೆ. ಬರ್ತ್ ಡೇ ಕೇಕ್ ಕಟ್ ಮಾಡಿ ಹೈದರಾಬಾದ್ಗೆ ಹೋಗಿಬಿಟ್ಟಿದ್ದೆ. ನಮ್ಮ ಮನೆಯಿಂದ ಬಿರಿಯಾನಿ ಮಾಡುವ ವಿಡಿಯೊ ಹಾಕಿದ್ದೆ. ನಾನು ಡ್ರಗ್ಸ್ ತೆಗೆದುಕೊಂಡಿಲ್ಲ. ಅವರು ಎಲ್ಲಾ ಟೆಸ್ಟ್ಗಳನ್ನು ಮಾಡಿದ್ದಾರೆ. ಸುಖಾಸುಮ್ಮನೆ ನನ್ನನ್ನು ಸಿಲುಕಿಸುವ ಕೆಲಸ ಆಗ್ತಿದೆ ಎಂದು ಆರೋಪಿಸಿದ್ದಾರೆ.
ರೇವ್ ಪಾರ್ಟಿಗೆ ಸಂಬಂಧಪಟ್ಟಂತೆ ತೆಲುಗು ನಟಿ ಹೇಮಾ ಪೊಲೀಸರ ಮುಂದೆ ಬಿಲ್ಡಪ್ ಕೊಡಲು ಹೋಗಿ ಲಾಕ್ ಆಗಿದ್ದಾರೆ. ನಾನು ತೆಲುಗಿನ ಫೇಮಸ್ ನಟಿ ಎಂದು ಹೇಳಿಕೊಂಡಿದ್ದೇ ಅವರಿಗೆ ಮುಳುವಾಗಿದೆ ಎನ್ನಲಾಗಿದೆ.
ಮಾಧ್ಯಮಗಳ ಮೇಲೆ ಗರಂ;
ಇನ್ನು, ಇಂದು ಕೆ ಸಿ ಜನರಲ್ ಆಸ್ಪತ್ರೆಗೆ ಹೇಮಾ ಅವರನ್ನು ಕರೆತಂದು ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ನಂತರ ಅಲ್ಲಿಂದ ಹೊರಬಂದ ಹೇಮಾ, ಮಾಧ್ಯಮ ಸಿಬ್ಬಂದಿಗಳನ್ನು ಕಂಡಕೂಡಲೇ ಗರಂ ಆಗಿದ್ದಾರೆ. ತೆಲುಗಿನಲ್ಲಿ ಕೂಗಾಡುತ್ತ ಪೊಲೀಸರ ಜೀಪು ಹತ್ತಿಕೊಂಡು ಹೋಗಿದ್ದಾರೆ.
The Central Crime Branch probing the Bengaluru rave party case arrested Telugu film actress Hema following interrogation on Monday. The rave party was organised on May 19 at a farmhouse near Electronic City.
17-01-26 05:53 pm
HK News Desk
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm