ಬ್ರೇಕಿಂಗ್ ನ್ಯೂಸ್
04-06-24 02:44 pm HK News Desk ಕರ್ನಾಟಕ
ಮೈಸೂರು, ಜೂ 04: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಾಜವಂಶಸ್ಥ ಯದುವೀರ್ ಒಡೆಯರ್ ಅವರು ಗೆದ್ದು ಬೀಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಅವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಕಂಡಿದ್ದಾರೆ.
ಸಿಎಂ ಸಿದ್ದರಾಯ್ಯನವರ ತವರು ಜಿಲ್ಲೆ ಮೈಸೂರು. ಈ ಕ್ಷೇತ್ರದಿಂದ ರಾಜವಂಶಸ್ಥರು ಕಣಕ್ಕೆ ಇಳಿದಿದ್ದ ಕಾರಣ ಇಡೀ ರಾಜ್ಯಾದ್ಯಂತ ಭಾರೀ ಗಮನ ಸೆಳೆದಿತ್ತು. ಕಾಂಗ್ರೆಸ್ನಿಂದ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿಯಬಹುದು ಎಂಬ ಲೆಕ್ಕಾಚಾರ ಕೂಡ ಇತ್ತು.
ಇನ್ನು, ಒಕ್ಕಲಿಗ ಸಮುದಾಯದ ಮತಗಳು ಹೆಚ್ಚಿದ್ದ ಕಾರಣ ಮೈಸೂರಿನಿಂದ ಕಾಂಗ್ರೆಸ್ ಸ್ಥಳೀಯ ನಾಯಕ ಎಂ. ಲಕ್ಷ್ಮಣಗೆ ಅವಕಾಶ ಮಾಡಿಕೊಡಲಾಗಿತ್ತು. ಕ್ಷೇತ್ರದಲ್ಲಿ ಒಕ್ಕಲಿಗರು ಜಾಸ್ತಿ ಇದ್ದ ಕಾರಣ ಕಾಂಗ್ರೆಸ್ ಗೆಲ್ಲಬಹುದು ಎಂದು ಭಾವಿಸಿತ್ತು.
ಸದ್ಯ ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ 714906 ವೋಟ್ಗಳು ಬಿದ್ದಿವೆ. ಎಂ. ಲಕ್ಷ್ಮಣ ಅವರು 604352 ಮತಗಳು ಪಡೆದುಕೊಂಡಿದ್ದಾರೆ. ಯದುವೀರ್ 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
ಅಧಿಕೃತ ಫಲಿತಾಂಶ ಘೋಷಣೆಗೂ ಮುನ್ನವೇ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ನಾಮಫಲಕ ವೈರಲ್ ಆಗುತ್ತಿದೆ. ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು- ಕೊಡಗು ಸಂಸದರು ಎಂಬ ನಾಮಫಲಕ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬರುವ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಯದುವೀರ್ ಯುವ ಬ್ರಿಗೇಡ್ ವತಿಯಿಂದ ಈ ನಾಮಫಲಕವನ್ನು ಉಡುಗೊರೆ ನೀಡಲಾಗಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಫೋಟೋ ಕ್ಲಿಕ್ಕಿಸಲಾಗಿದೆ. ತಾಯೊ ಚಾಮುಂಡಿಯ ಎದುರು ನಾಮಫಲಕ ಇರಿಸಿ ಪ್ರಧಾನ ಅರ್ಚಕರು ಪೂಜೆ ಸಲ್ಲಿಸಿದ ಚಿತ್ರಗಳು ಸಹ ವೈರಲ್ ಆಗುತ್ತಿವೆ. ಜೊತೆಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೈಸೂರು- ಕೊಡಗು ಸಂಸದರು ಎಂಬ ನಾಮಫಲಕದ ಚಿತ್ರ ಕ್ಲಿಕ್ಕಿಸಿ ವೈರಲ್ ಮಾಡಲಾಗಿದೆ.
Having established a lead of more than one lakh votes, the scion of erstwhile royal family of Mysuru Yaduveer Krishnadatta Chamaraja Wadiyar is set to triumph over his Congress rival M. Lakshmana in the prestigious Mysuru Lok Sabha constituency. The counting of votes was still in progress, but the wide margin had instilled confidence among BJP supporters of Mr Yaduveer’s victory.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:15 pm
Mangalore Correspondent
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am