ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm