ಬ್ರೇಕಿಂಗ್ ನ್ಯೂಸ್
08-06-24 10:53 am HK News Desk ಕರ್ನಾಟಕ
ಮಂಡ್ಯ, ಜೂನ್ 8: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ. ಫುಲ್ ಟೈಮ್ ಪಕ್ಷದಲ್ಲಿಯೇ ತೊಡಗಿಸಿಕೊಳ್ಳುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿನಿಮಾ ರಂಗವನ್ನು ಸದ್ಯಕ್ಕೆ ಪೂರ್ತಿ ಬಂದ್ ಮಾಡಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣದಲ್ಲಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ. ಶೀಘ್ರ ದಲ್ಲಿ ಚನ್ನಪಟ್ಟಣದ ಜನತೆಗೆ ಕೃತಜ್ಞತೆ ಸಲ್ಲಿಸಲಾಗುವುದು. ನಂತರ ಮಂಡ್ಯದಲ್ಲಿ ಸಭೆ ನಡೆಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ಹೇಳಿದರು.
ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಚುನಾವಣೆ ವೇಳೆ ವೇದಿಕೆ ಹಂಚಿಕೊಳ್ಳಲಾಗದಿದ್ದರೂ ಕುಮಾರಣ್ಣನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜನಪ್ರತಿನಿಧಿಗಳಾದವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮಾತುಗಳ ಮೇಲೆ ಹಿಡಿತವಿರಬೇಕು. ಅಧಿಕಾರದಲ್ಲಿದ್ದಾಗ ಏನು ಬೇಕಾದರೂ ಮಾತಾಡಬಹುದೆಂಬ ಉದ್ಧಟತನವನ್ನು ಬಿಡಬೇಕು. ಮದ್ದೂರು ಶಾಸಕರು ನೀಡಿದ್ದ ಅಸಂಬದ್ಧ ಹೇಳಿಕೆಗೆ ಈಗ ಜನರೇ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ನಿಲ್ಲಬೇಕೆಂಬುದು ಜನರ ಅಪೇಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡುತ್ತಾರೆ ಎಂದರು.
ಚುನಾವಣೆಗೆ ಮುನ್ನ ಅಥವಾ ನಂತರ ಇಂತಹ ಖಾತೆ ಬೇಕೆಂದು ಎಚ್ಡಿಕೆಯವರು ಬೇಡಿಕೆ ಇಟ್ಟಿಲ್ಲ. ಎರಡು ಬಾರಿ ಸಿಎಂ ಆಗಿದ್ದರು. ನಾಡಿಗೆ ಅವರದೇ ಆದ ಸೇವೆ ಸಲ್ಲಿಸಿದ್ದಾರೆ. ಮೂರು ಬಾರಿ ಸಂಸದರಾಗಿದ್ದಾರೆ. ಈ ಅನುಭವದ ಆಧಾರದ ಮೇಲೆ ಕೇಂದ್ರದ ನಾಯಕರು ಸಂಪುಟದಲ್ಲಿ ಸ್ಥಾನ ಕೊಡಬಹುದು. ಈ ನಾಡನ್ನು ಕಟ್ಟಲು ಬಿಜೆಪಿಯ ಕೇಂದ್ರದ ನಾಯಕರು ಕುಮಾರಸ್ವಾಮಿ ಅವರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಪರೋಕ್ಷವಾಗಿ ನಿಖಿಲ್ ತಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟರು.
The superiors have given me the responsibility of building the party in the state. So he no longer acts in movies. JDS Youth Unit State President Nikhil Kumaraswamy said that there is no idea of making a movie at the moment.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm