ಬ್ರೇಕಿಂಗ್ ನ್ಯೂಸ್
11-06-24 11:01 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಕೊಲೆ ಪ್ರಕರಣ ಒಂದರಲ್ಲಿ ಖ್ಯಾತ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ಮನೆಯಿಂದ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದರ್ಶನ್ ಜೊತೆಗಿದ್ದ ಹತ್ತು ಮಂದಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ. ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು. ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Kannada actor Darshan has been reportedly arrested by the Kamakshi Palya cops in connection with a murder case. According to media reports, he has been arrested in connection with the murder of a man named Renuka Swamy, who allegedly sent obscene messages to actress Pavithra Gowda. A total of 10 people have been arrested.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm