ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm