ಬ್ರೇಕಿಂಗ್ ನ್ಯೂಸ್
11-06-24 03:31 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ, ಪಕ್ಷದ ಜಿಲ್ಲಾ ಮುಖಂಡರ ಜೊತೆಗೆ ಸಮನ್ವಯ ಕೊರತೆ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ ಉಸ್ತುವಾರಿ ಸಚಿವರ ಬದಲಾವಣೆಯಾಗಲಿದೆ ಎನ್ನುವ ಮಾಹಿತಿಯಿದೆ. ಪರಿಷ್ಕೃತ ಉಸ್ತುವಾರಿ ಸಚಿವರ ಪಟ್ಟಿ ಸದ್ಯದಲ್ಲೇ ಹೊರಬೀಳುವ ಸಾಧ್ಯತೆಯಿದೆ.
ರಾಯಚೂರು ಮೂಲದ ಸಚಿವ ಎನ್.ಎಸ್ ಬೋಸರಾಜು ಕೊಡಗು ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ಬಯಸಿದ್ದು, ನಾಗೇಂದ್ರ ರಾಜಿನಾಮೆಯಿಂದ ತೆರವಾಗುವ ಬಳ್ಳಾರಿ ಉಸ್ತುವಾರಿ ಪಡೆಯಲು ಕಣ್ಣಿಟ್ಟಿದ್ದಾರೆ. ಮೈಸೂರು ಜಿಲ್ಲೆಯ ಉಸ್ತುವಾರಿ ಹೊಂದಿರುವ ಡಾ.ಎಚ್.ಸಿ ಮಹದೇವಪ್ಪ ಅವರು ಚಾಮರಾಜನಗರ ಉಸ್ತುವಾರಿ ಬಯಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದು, ಕೆ.ವೆಂಕಟೇಶ್ ಅವರಿಗೆ ಮೈಸೂರು ಉಸ್ತುವಾರಿ ನೀಡುವ ನಿರೀಕ್ಷೆಯಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಹೊಂದಿದ್ದು, ಕಾರ್ಯ ಬಾಹುಳ್ಯದ ಒತ್ತಡದ ಕಾರಣ ಬಿಡುಗಡೆ ಬಯಸಿದ್ದಾರೆ ಎನ್ನಲಾಗುತ್ತಿದೆ. ಅವರಿಗೆ ಸಣ್ಣ ಜಿಲ್ಲೆ ಮತ್ತು ನಿಕಟ ಒಡನಾಟ ಇರುವ ಕೊಡಗು ಉಸ್ತುವಾರಿ ಕೊಡುವ ಸಾಧ್ಯತೆಯಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಸೂಕ್ಷ್ಮವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿಯನ್ನು ಬೇರೆ ಯಾರಿಗೆ ಕೊಡಬೇಕು ಎನ್ನುವ ಬಗ್ಗೆ ತೀರ್ಮಾನ ಆಗಿಲ್ಲ. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬದಲಾಯಿಸಲು ಪಕ್ಷದ ಕಾರ್ಯಕರ್ತರೇ ಅಭಿಯಾನ ನಡೆಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ವೈಫಲ್ಯ, ಎರಡು ಅವಧಿಯಲ್ಲಿ ಶಾಸಕರಿಲ್ಲದೆ ಪಕ್ಷಕ್ಕಾದ ಹಿನ್ನಡೆಯಿಂದಾಗಿ ಜಿಲ್ಲಾ ಮುಖಂಡರ ಜೊತೆಗೆ ಸಮನ್ವಯ ಸಾಧಿಸುವುದು ಮತ್ತು ಜಿಪಂ, ತಾಪಂ ಚುನಾವಣೆಗೆ ತಯಾರಿ ನಡೆಸಬೇಕಾದ ಕಾರಣ ಸೂಕ್ತ ವ್ಯಕ್ತಿಗೆ ಉಸ್ತುವಾರಿ ನೀಡಬೇಕು ಎನ್ನುವ ಆಗ್ರಹವನ್ನು ಅಲ್ಲಿನ ನಾಯಕರು ಮುಂದಿಟ್ಟಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಪಕ್ಷದ ಸ್ಥಳೀಯ ಮುಖಂಡರ ವಿಶ್ವಾಸ ಪಡೆಯಲು ವಿಫಲರಾದ ಸಚಿವ ಕೆ.ಎನ್. ರಾಜಣ್ಣ ಅವರನ್ನು ಬದಲಿಸಬೇಕೆಂಬ ಒತ್ತಾಯ ಇದೆ. ರಾಜಣ್ಣ ಅವರನ್ನು ಕೈಬಿಟ್ಟು ಅಲ್ಲಿ ಬೇರೊಬ್ಬ ವ್ಯಕ್ತಿಗೆ ಉಸ್ತುವಾರಿ ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ. ದಕ್ಷಿಣ ಕನ್ನಡ, ಉಡುಪಿಗೆ ಉಸ್ತುವಾರಿ ವಹಿಸಿಕೊಳ್ಳುವ ಅನುಭವಿ ವ್ಯಕ್ತಿ ಯಾರು ಎನ್ನುವ ಚರ್ಚೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬಗ್ಗೆ ಟೀಕೆ ಇಲ್ಲದೇ ಇರುವುದರಿಂದ ಅವರನ್ನು ಮುಂದುವರಿಸುವ ಸಾಧ್ಯತೆಯೂ ಇದೆ.
Karnataka Chief Minister Siddaramaiah has decided to replace the district in-charge ministers of some districts in the wake of the lok sabha poll debacle and lack of coordination with the party's district leaders. Udupi, Dakshina Kannada, Kodagu, Mysuru and Hassan are likely to be replaced by ministers in-charge. The revised list of ministers in charge is likely to be out soon.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm