ಬ್ರೇಕಿಂಗ್ ನ್ಯೂಸ್
12-06-24 12:27 pm HK News Desk ಕರ್ನಾಟಕ
ಬೆಳಗಾವಿ, ಜೂನ್ 12: ಮಂಗಳೂರು ಮೂಲದ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಬೆಳಗಾವಿಯ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾನೆ. ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರು ಸೇರಿ ಕೋರ್ಟ್ ಒಳಗಡೆಯೇ ಧರ್ಮದೇಟು ನೀಡಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಸೇರಿದಂತೆ ಹಲವಾರು ಕೇಸುಗಳನ್ನು ಎದುರಿಸುತ್ತಿರುವ ಜಯೇಶ್ ಪೂಜಾರಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದು ಇಂದು ಕೋರ್ಟಿಗೆ ಹಾಜರುಪಡಿಸಲು ಕರೆತಂದಿದ್ದಾಗ ಕೃತ್ಯ ನಡೆದಿದೆ. ಕೋರ್ಟ್ ಒಳ ಭಾಗದಲ್ಲೇ ವಕೀಲರು, ಸಾರ್ವಜನಿಕರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿದ್ದಾರೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಪೊಲೀಸರು ಹೊರಗಡೆ ಕರೆದುಕೊಂಡು ಹೋಗಿದ್ದಾರೆ.




ಕೈದಿಯನ್ನು ಬಳಿಕ ಪೊಲೀಸರು ಸ್ಥಳೀಯ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಜೈಲಿನಿಂದ ಜೀವ ಬೆದರಿಕೆ ಒಡ್ಡಿದ ಪ್ರಕರಣ ಸಂಬಂಧಿಸಿ ಪೊಲೀಸರು ಆತನನ್ನು ವಿಚಾರಣೆಗೆ ಕರೆತಂದಿದ್ದರು. ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಅಲೋಕ್ ಕುಮಾರ್ ಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರ ನಾಗಪುರದ ಕಚೇರಿಗೆ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಲ್ಲದೆ, ಹತ್ತು ಕೋಟಿ ನೀಡುವಂತೆ ಜಯೇಶ್ ಪೂಜಾರಿ ಡಿಮ್ಯಾಂಡ್ ಇಟ್ಟಿದ್ದ. ಕೋರ್ಟ್ ನಲ್ಲಿ ಸಕಾಲಕ್ಕೆ ತನ್ನ ಕೇಸಿನ ಕುರಿತು ಅಹವಾಲು ಸ್ವೀಕರಿಸುತ್ತಿಲ್ಲ ಎಂಬ ಕೋಪದಲ್ಲಿ ಕೈದಿ ಪಾಕ್ ಪರ ಘೋಷಣೆ ಕೂಗಿ ವಿಕೃತಿ ಮೆರೆದಿದ್ದಾನೆ ಎಂದು ತಿಳಿದುಬಂದಿದೆ.
ಆರೋಪಿ ಜಯೇಶ್ ಪೂಜಾರಿ ಮೂಲತಃ ಮಂಗಳೂರಿನ ಪುತ್ತೂರಿನವನಾಗಿದ್ದು ಮುಂಬೈನಲ್ಲಿದ್ದು ಅಪರಾಧ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ. ಹಿಂದೆ ಅಂಡರ್ ವರ್ಲ್ಡ್ ಪಾತಕಿಗಳ ಜೊತೆಗೆ ಸಂಪರ್ಕದಲ್ಲಿದ್ದು ಉದ್ಯಮಿಗಳನ್ನು ಬೆದರಿಸಿ ಹಣ ಕೀಳುತ್ತಿದ್ದ. ನಾಲ್ಕು ವರ್ಷಗಳ ಹಿಂದೆ ಬಂಧನಕ್ಕೀಡಾಗಿ ಜೈಲಿನಲ್ಲಿದ್ದಾನೆ.
vCriminal #JayeshPoojari from puttur thrahsed in court hall at belagavi for #propakistan #slogans, video goes viral pic.twitter.com/wxf2dWGZJc
— Headline Karnataka (@hknewsonline) June 12, 2024
Criminal Jayesh Poojari from puttur thrahsed in court hall at belagavi for pro pakistan slogans, video goes viral. Jayesh Pujari was arrested for allegedly making threatening phone calls made to Union minister Nitin Gadkari this year, and Afsar Pasha, who is currently in jail in Karnataka after being convicted in a Bengaluru terror attack case.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm