ಬ್ರೇಕಿಂಗ್ ನ್ಯೂಸ್
13-06-24 04:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 13: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪೊಲೀಸ್ ಠಾಣೆಯನ್ನ ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ.
ಹೌದು. ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ ನ ಕೊಲೆಗಡುಕರು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ನೀಡಿದ್ದಾರೆ. ಅಂತೇ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಿನ್ನೆಯವರೆಗೆ ಅಭಿಮಾನಿಗಳು ಠಾಣೆಯ ಮುಂದೆ ಜಮಾಯಿಸಿದ್ದರು. ಈ ವೇಳೆ ಠಾಣೆ ಮುಂದೆ ಬ್ಯಾರಿಕೇಡ್ಗಳನ್ನು ಹಾಕಿದ್ದರು. ಆದರೆ ಇಂದು ಅಭಿಮಾನಿಗಳು ಕೂಡ ಠಾಣೆಯತ್ತ ಸುಳಿದಿಲ್ಲ. ಆದರೂ ಠಾಣೆಯ ಕಾಂಪೌಂಡ್ಗೆ ಶಾಮಿಯಾನ ಕಟ್ಟಿದ್ದು, ಭಾರೀ ಅನುಮಾನ ಹುಟ್ಟಿಸಿದೆ. ಮೊನ್ನೆ ಆರೋಪಿಗಳಿಗೆ ಠಾಣೆ ಒಳಗೆ ಬಿರಿಯಾನಿ ಕೊಟ್ಟಿದ್ದರು ಎಂದು ಹೇಳಲಾಗುತ್ತಿತ್ತು. ಈ ಬೆನ್ನಲ್ಲೇ ಇಂದು ಶಾಮಿಯಾನದಿಂದ ಮುಚ್ಚಿರುವುದು ಠಾಣೆ ಒಳಗಡೆ ಆರೋಪಿಗಳಿಗೆ ರಾಜಮರ್ಯಾದೆ ಕೊಡಲಾಗುತ್ತಿದೆಯಾ..? ಇವುಗಳನ್ನು ಮಾಧ್ಯಮಗಳಿಂದ ಮುಚ್ಚಿಡಲು ಈ ರೀತಿ ಮಾಡಲಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.
ಸಾರ್ವಜನಿಕರಿಗೂ ಪ್ರವೇಶ ನಿರ್ಬಂಧಿಸಿ ಠಾಣೆ ಕ್ಲೋಸ್ ಮಾಡಲಾಗಿದೆ. ಇನ್ನೊಂದೆಡೆ ತುರ್ತು ವಿಚಾರಗಳಿಗೆ ಠಾಣೆಗೆ ಸಂಪರ್ಕ ಮಾಡಲು ಬಂದವರಿಗೂ ಪೊಲೀಸರು ಪ್ರತಿಕ್ರಿಯೆ ನೀಡುತ್ತಿಲ್ಲ. ಸಾರ್ವಜನಿಕ ಆಸ್ತಿಯಾಗಿರೋ ಪೊಲೀಸ್ ಠಾಣೆಗೆ ಸೈಡ್ ವಾಲ್ ಕಟ್ಟೋದೇನಿದೆ..!?, ಯಾರನ್ನ ಮೆಚ್ಚಿಸೋಕೆ ಪೊಲೀಸರು ಈ ಕೆಲಸ ಮಾಡುತ್ತಿದ್ದಾರೆ ಎಂಬ ಆಕ್ರೋಶದ ಪ್ರಶ್ನೆಗಳು ಎದ್ದಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಮರ್ಡರ್ ಪ್ರಕರಣ ಸಂಬಂಧ ಇದೀಗ ಪೊಲೀಸರು ಸ್ಯಾಂಡಲ್ವುಡ್ ಸ್ಟಾರ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಸೋ ಕಾಲ್ಡ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 14 ಮಂದಿಯನ್ನ ಬಂಧಿಸಿದ್ದಾರೆ. ಸದ್ಯ ಆರೋಪಿಗಳೆಲ್ಲರೂ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿದ್ದು, ಇಂದು ಕೂಡ ಸ್ಥಳ ಮಹಜರು ಪ್ರಕ್ರಿಯೆ ನಡೆಯಲಿದೆ.
Prohibitory orders under Section 144 of CrPC have been imposed for five days around 200-metre radius of the Annapoorneshwari Nagar police station, where actor Darshan and his 12 associates, accused in the murder of Renukaswamy, have been housed.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm