ಬ್ರೇಕಿಂಗ್ ನ್ಯೂಸ್
15-06-24 11:02 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ, ಶಾಸಕ ಸ್ಥಾನಕ್ಕೆ ರಾಜಿನಾಮೆಯಿತ್ತ ಸ್ಥಾನಗಳಿಗೆ ಸದ್ಯದಲ್ಲೇ ಉಪ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ.ಕುಮಾರಸ್ವಾಮಿ ಮತ್ತು ಬಳ್ಳಾರಿಯ ತುಕರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ, ವಿಧಾನ ಪರಿಷತ್ ಸದಸ್ಯ ಸ್ಥಾನ ಬಿಟ್ಟು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾದ ಪರಿಷತ್ ಸ್ಥಾನಕ್ಕೂ ಚುನಾವಣೆ ನಡೆಯಲಿದೆ.
ಬೊಮ್ಮಾಯಿ ಪ್ರತಿನಿಧಿಸುತ್ತಿದ್ದ ಶಿಗ್ಗಾವಿ, ಕುಮಾರಸ್ವಾಮಿ ಅವರ ಚನ್ನಪಟ್ಟಣ ಮತ್ತು ತುಕಾರಾಂ ಅವರ ಸಂಡೂರು ವಿಧಾನಸಭಾ ಕ್ಷೇತ್ರ ಖಾಲಿಯಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸೋಲುಂಡಿರುವ ಡಿ.ಕೆ.ಸುರೇಶ್ ಅವರನ್ನು ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಣಕ್ಕೆ ಇಳಿಸಿ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಟಕ್ಕರ್ ನೀಡಲು ಚಿಂತನೆ ನಡೆದಿದೆ.
ಲೋಕಸಭೆ ಚುನಾವಣೆಯಲ್ಲಿ ಸೋತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಪರ್ಧೆ ಮಾಡುವುದಕ್ಕೆ ಸ್ವತಃ ಡಿ.ಕೆ.ಸುರೇಶ್ ನಿರಾಕರಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ನಿಟ್ಟಿನಲ್ಲಿ ಡಿಕೆಶಿ ತೆಗೆದುಕೊಳ್ಳುವ ನಿರ್ಣಯವೇ ಅಂತಿಮ. ಇನ್ನು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಲ್ಲಿ ಸಿ.ಪಿ.ಯೋಗೇಶ್ವರ್ ಅವರು ಸ್ಪರ್ಧಿಸುವ ಬಗ್ಗೆ ಚರ್ಚೆಯಿದೆ. ಜೆಡಿಎಸ್ ಕ್ಷೇತ್ರವಾಗಿರುವುದರಿಂದ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವ ಸಾಧ್ಯತೆಯೂ ಇದೆ.
ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸಿನ ತುಕರಾಂ ಕುಟುಂಬಕ್ಕೆ ಟಿಕೆಟ್ ನೀಡಲು ಚರ್ಚೆ ನಡೆದಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದು ಚರ್ಚೆ ಹಂತದಲ್ಲಿದೆ.
ಮತ್ತೊಂದೆಡೆ ಶಿಗ್ಗಾಂವ ಕ್ಷೇತ್ರಕ್ಕೆ ಬಸವರಾಜ ಬೊಮ್ಮಾಯಿ ಅವರ ಪುತ್ರನಿಗೆ ಬಿಜೆಪಿ ಟಿಕೆಟ್ ಎಂದು ಹೇಳಲಾಗುತ್ತಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ರಾಜಕೀಯವಾಗಿ ಎಲ್ಲರ ಗಮನ ಸೆಳೆಯುತ್ತಿದೆ.
ವಿಧಾನಸಭೆ ಚುನಾವಣೆ ಜೊತೆಯಲ್ಲೇ ಪರಿಷತ್ತಿಗೂ ಉಪ ಚುನಾವಣೆ ನಡೆಯುತ್ತಾ ಎನ್ನುವ ಕುತೂಹಲ ಇದೆ. ಕೋಟ ಶ್ರೀನಿವಾಸ ಪೂಜಾರಿ ಪ್ರತಿನಿಧಿಸುತ್ತಿದ್ದ ಕ್ಷೇತ್ರಕ್ಕೆ ಸ್ಥಳೀಯಾಡಳಿತ ಸದಸ್ಯರು ಆಯ್ಕೆ ಮಾಡುತ್ತಾರೆ. ಗ್ರಾಪಂ, ಜಿಪಂ ಚುನಾವಣೆ ನಡೆಯದೆ ಏಳೆಂಟು ವರ್ಷ ಆಗಿದ್ದು ತಾಂತ್ರಿಕವಾಗಿ ಮತದಾನಕ್ಕೆ ಅವಕಾಶ ಇದ್ದರೆ ಜೊತೆ ಜೊತೆಯಲ್ಲೇ ಚುನಾವಣೆ ನಡೆದರೂ ಅಚ್ಚರಿಯಿಲ್ಲ.
In the wake of their victory in the recently concluded Lok Sabha Elections 2024, Karnataka leaders H.D. Kumaraswamy of the Janata Dal (Secular) and Basavaraj Bommai of the Bharatiya Janata Party have resigned from their positions as Members of the Legislative Assembly (MLAs).
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm