ಬ್ರೇಕಿಂಗ್ ನ್ಯೂಸ್
16-06-24 02:42 pm Bengaluru Correspondent ಕರ್ನಾಟಕ
Photo credits : NEWS FIRST
ಬೆಂಗಳೂರು, ಜೂ 16: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾ ಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ಅಲ್ಲದೇ ರೇಣುಕಾಸ್ವಾಮಿಯ ಮೇಲೆ ಮೊದಲು ಹಲ್ಲೆ ಮಾಡಿದ್ದೇ ಪವಿತ್ರಾ ಗೌಡ ಎಂಬ ಮಾಹಿತಿಯೂ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ.
ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಮನೆಗೆ ಆಕೆ ಮತ್ತು ಅವರ ಆಪ್ತ ಪವನ್ ಎಂಬವರನ್ನು ಕರೆದೊಯ್ಯಲಾಗಿದ್ದು, ಕೃತ್ಯದ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ಹಲ್ಲೆ ಮಾಡಲು ಬಳಸಿದ್ದ ಚಪ್ಪಲಿಯನ್ನ ಜಪ್ತಿ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬನನ್ನು ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

ಮಮ್ಮಿಯನ್ನ ನೋಡಲು ಬಂದ ಮಗಳು ;
ಪವಿತ್ರ ಗೌಡ ಸದ್ಯ ಪೊಲೀಸ್ ಕಷ್ಟಡಿಯಲ್ಲಿದ್ದಾಳೆ. ಪೊಲೀಸರ ವಶದಲ್ಲಿರುವ ತಾಯಿಯನ್ನ ನೋಡಲು ಬೆಳಿಗ್ಗೆ ಮಗಳು ಬಂದಿದ್ದಾಳೆ. ಮಗಳನ್ನು ಕಂಡ ಪವಿತ್ರಾ ಗೌಡ ಭಾವುಕಳಾಗಿದ್ದಾರೆ.
ನಿನ್ನೆ ತಾಯಿಯನ್ನ ಭೇಟಿಯಾಗಳು ಮಗಳು ಖುಷಿ ಪೊಲೀಸ್ ಠಾಣೆಗೆ ಓಡೋಡಿ ಬಂದಳು. ಅಜ್ಜಿಯ ಜೊತೆಗೆ ಠಾಣೆಗೆ ಬಂದಿದ್ದಳು. ಆ ವೇಳೆ ತಾಯಿಯ ಪರಿಸ್ಥಿತಿ ಕಂಡು ಮಗಳು ಖುಷಿ ಮರುಕಪಟ್ಟಿದ್ದಾಳೆ.
Darshan murder case, police search Pavithra Gowda house in Bangalore, seize dress and sandals. Police are checking the CCTV footages to check the timings of Pavithra entering the house on the day of murder.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm