ಬ್ರೇಕಿಂಗ್ ನ್ಯೂಸ್
22-06-24 03:27 pm Bengaluru Correspondent ಕರ್ನಾಟಕ
ಬೆಂಗಳೂರು, ಜೂನ್ 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪಾರಾಗಲು ನಟ ದರ್ಶನ್ ಹಣದ ಹೊಳೆ ಹರಿಸಿದ್ದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವೇಳೆ, 40 ಲಕ್ಷ ರೂ.ನಷ್ಟು ಹಣ ಸಾಲ ನೀಡಿದ್ದು ಬಿಜೆಪಿ ಶಾಸಕರೊಬ್ಬರ ಪರಮಾಪ್ತ ರಾಮ್ ಮೋಹನ್ ರಾಜ್ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಇದರ ಬೆನ್ನಲ್ಲೇ ಹಣ ಕೊಟ್ಟಿದ್ದ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಮೇಯರ್ ರಾಮ್ ಮೋಹನ್ರಾಜ್ ಅವರನ್ನು ವಿಚಾರಣೆ ನಡೆಸಲು ಮುಂದಾಗಿದ್ದಾರೆ.
ಕೊಲೆ ಪ್ರಕರಣದ ಆರೋಪಿ ದರ್ಶನ್ ವಿಚಾರಣೆ ವೇಳೆ, ಕೇಸ್ನಿಂದ ಬಚಾವಾಗಲು ಮೋಹನ್ ರಾಜ್ ಅವರಿಂದ 40 ಲಕ್ಷ ರೂ. ಸಾಲ ಪಡೆದು ಮನೆಯಲ್ಲಿಟ್ಟಿದ್ದೆ ಎಂದು ಹೇಳಿಕೆ ನೀಡಿದ್ದರು. ಈ ಹಣವನ್ನೂ ಈಗಾಗಲೇ ಜಪ್ತಿ ಮಾಡಿಕೊಳ್ಳಲಾಗಿದೆ. ಆರೋಪಿ ದರ್ಶನ್ಗೆ ಹಣ ಕೊಟ್ಟಿದ್ದು ನಿಜವೇ? ಯಾವ ಉದ್ದೇಶಕ್ಕಾಗಿ ಸಾಲ ನೀಡಲಾಗಿತ್ತು. ಆರೋಪಿ ಕೃತ್ಯದ ಬಗ್ಗೆ ಏನಾದರೂ ಚರ್ಚೆ ನಡೆಸಿದ್ದರೇ ಎಂಬುದು ಸೇರಿದಂತೆ ಹಲವು ವಿಚಾರಗಳನ್ನು ತಿಳಿಯಲು ಪೊಲೀಸರು ಮೋಹನ್ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದರೂ ವಿಚಾರಣೆಗೆ ಬಂದಿರಲಿಲ್ಲ ಎಂದು ಪೊಲೀಸ್ ಮೂಲಗಳು ಹೇಳಿವೆ.
ಆರೋಪಿ ನಟ ದರ್ಶನ್, ವಿನಯ್ ಸೇರಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ್ದಾರೆ. ದರ್ಶನ್ ಬಳಿ ಜಪ್ತಿ ಮಾಡಲಾಗಿರುವ ಹಣದ ಮೂಲ ಹಾಗೂ ಕೃತ್ಯದ ಬಗ್ಗೆ ಹಲವರನ್ನು ಸಂಪರ್ಕಿಸಿದ್ದ ಕುರಿತೂ ಸರಣಿ ಪ್ರಶ್ನೆಗಳನ್ನು ಕೇಳಿ ಹೇಳಿಕೆ ದಾಖಲಿಸಿದ್ದಾರೆ. ಸಾಕ್ಷ್ಯ ನಾಶದ ಆರೋಪ ಹೊತ್ತಿರುವ ಪ್ರದೋಶ್, ಕರೆಂಟ್ ಶಾಕ್ ನೀಡಿರುವ ಧನರಾಜ್ನನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗಿದೆ. ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ನೂ ಹಲವರ ಕುರಿತು ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ನಾಲ್ವರು ಆರೋಪಿಗಳ ಕಸ್ಟಡಿ ಅವಧಿ ಶನಿವಾರ ಮುಕ್ತಾಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ದರ್ಶನ್ ಸೇರಿ ನಾಲ್ವರು ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
In a major development in the ongoing investigation of the Renukaswamy murder case, Kannada actor Darshan Thoogudeepa has admitted to borrowing ₹40 lakh from one of his friends to pay for the destruction of evidence.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm