ಬ್ರೇಕಿಂಗ್ ನ್ಯೂಸ್
24-06-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ ಹಿಂದೆ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣಗಳ ಬಳಕೆಯನ್ನ ನಿಷೇಧಿಸಲಾಗಿತ್ತು.
ಇದೇ ವೇಳೆ ಚಿಕನ್ ಕಬಾಬ್ ಗಳಲ್ಲೂ ಕೃತಕ ಬಣ್ಣಗಳ ಬೆರಸುವಿಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪರೀಕ್ಷೆಗೊಳಪಡಿಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆಹಾರ ಸುರಕ್ಷತಾ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು. ಕಳಪೆ ಗುಣಮಟ್ಟದ ಆಹಾರ ಸೇವನೆ ಇತ್ತೀಚೆಗೆ ಜನರ ಆರೋಗ್ಯದ ಮೇಲೆ ತೀವ್ರ ಹಾನಿಯನ್ನುಂಟು ಮಾಡುತ್ತಿದೆ. ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಹಾನಿಕಾರಕ ಆಹಾರದ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಚಿವರ ಸೂಚನೆಯ ಮೇರೆಗೆ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ಗಳನ್ನು ಗುಣಮಟ್ಟ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಚಿಕನ್ ಕಬಾಬ್ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಚಿಕನ್ ಕಬಾಬ್, ಫಿಶ್ ಆಹಾರಗಳಲ್ಲಿ ಕೃತಕ ಬಣ್ಣ ಬೆರಸುವಿಕೆಯನ್ನ ನಿಷೇಧಿಸಿ ಆಹಾರ ಸುರಕ್ಷತಾ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆ ಮಾಡಲಾಗಿರುತ್ತದೆ. ಪರಿಶೀಲಿಸಿದ ಮಾದರಿಗಳಲ್ಲಿ 08 ಕಬಾಬ್ ಮಾದರಿಗಳು ಕೃತಕ ಬಣ್ಣದಿಂದ (ಸನ್ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದೆ. The Food Safety and Standards Act, 2006 ರ ನಿಯಮ 3(1)(zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ.
ಆಹಾರ ಸುರಕ್ಷತಾ ಕಾಯ್ದೆ 2011 ರ ಅನ್ವಯ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟು ಮಾಡಬಹುದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಬಾಬ್ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ವರೆಗೆ ಜೈಲು ಶಿಕ್ಷೆ ಮತ್ತು ರೂ.10 ಲಕ್ಷ ವರೆಗೆ ದಂಡ ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
The Karnataka government on Monday ordered a complete ban on the use of artificial colours in chicken kebabs and fish dishes in the state. The development came days after random samples of these items were subjected to quality checks, and it was found that artificial colours led to substandard quality.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 10:37 am
HK News Desk
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm