ಬ್ರೇಕಿಂಗ್ ನ್ಯೂಸ್
03-07-24 09:23 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 3: ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಡೆಂಗ್ಯು ಜ್ವರ ಜನಸಾಮಾನ್ಯರಿಗೆ ಹೊರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗ್ಯು ಜ್ವರಕ್ಕೆ ಉಚಿತ ಚಿಕಿತ್ಸೆ ಲಭ್ಯವಿದೆ. ಆದರೆ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಡೆಂಗ್ಯು ಪರೀಕ್ಷೆಗೆ ಬೆಲೆ ವಿಧಿಸದಂತೆ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಸಚಿವರ ಸೂಚನೆ ಮೇರೆಗೆ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ಆದೇಶ ಹೊರಡಿಸಿರುವ ಆರೋಗ್ಯ ಇಲಾಖೆ, ಡೆಂಗಿ ಟೆಸ್ಟಿಂಗ್ ಗೆ ದರ ನಿಗದಿಪಡಿಸಿದೆ. ಎರಡು ರೀತಿಯ ಟೆಸ್ಟಿಂಗ್ ಗಳಿಗೆ ಒಟ್ಟು 600 ರೂ. ದರ ನಿಗದಿ ಮಾಡಿ ಆದೇಶಿಸಿದೆ. NS1 ಹಾಗೂ Igm ಎರಡು ಟೆಸ್ಟಿಂಗ್ ಗಳಿಗೆ ತಲಾ 300 ರೂ. ಗಳನ್ನ ನಿಗದಿಪಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬರೋಟರಿಗಳು ಡೆಂಗಿ ಟೆಸ್ಟಿಂಗ್ ಮಾಡಲು 600 ರೂಪಾಯಿಗಿಂತ ಹೆಚ್ಚು ದರ ವಿಧಿಸುವಂತಿಲ್ಲ.
ಡೆಂಗ್ಯು ನಿಯಂತ್ರಣ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ವಿಡಿಯೋ ಕಾನ್ಫರೆನ್ಸ್ ಸಭೆ ಕರೆದಿದ್ದಾರೆ. ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿ ಸಿಇಒ, ನಗರ ಸ್ಥಳೀಯ ಸಂಸ್ಥೆಗಳು, ಡೆಂಗಿ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿದ್ದಾರೆ.
The Health Department has issued an important order to prevent dengue fever, which is common during the rainy season, from becoming a burden on the masses. Free treatment for dengue fever is available in government hospitals.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm