ಬ್ರೇಕಿಂಗ್ ನ್ಯೂಸ್
12-07-24 10:30 am Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 11: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಶಾಂತಿನಗರದ ಇ.ಡಿ ಕಚೇರಿಗೆ ಕರೆದುಕೊಂಡು ಬರುತ್ತಿದ್ದಾರೆ. ಬೆಂಗಳೂರಿನ ಅವರ ಮನೆಯಿಂದ ಇಡಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
94 ಕೋಟಿ ಹಣವನ್ನು ವಾಲ್ಮೀಕಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಆಗಿದೆ ಎಂಬ ಆರೋಪ ಇದೆ. ಸಚಿವ ಸೂಚನೆಯ ಮೇರೆಗೆ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಇದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಗೆ ರಾಜ್ಯ ಸರ್ಕಾರ ನೀಡಿತ್ತು.
ಎಸ್ಐಟಿ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲೇ ಇ.ಡಿ ದಾಳಿ ನಡೆಸಿತ್ತು. ಬಳ್ಳಾರಿ ಹಾಗೂ ಬೆಂಗಳೂರಿನ ನಿವಾಸ ಮತ್ತು ಕಚೇರಿಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ಹಲವಾರು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ಇದೀಗ ಹೆಚ್ಚಿನ ವಿಚಾರಣೆಗಾಗಿ ನಾಗೇಂದ್ರ ಅವರನ್ನು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಂತಿನಗರದಲ್ಲಿರುವ ಇ.ಡಿ ಕಚೇರಿಗೆ ಅವರನ್ನು ಕರೆತರಲಾಗಿದೆ
ಇನ್ನು 'ನನಗೇನೂ ಗೊತ್ತಿಲ್ಲ ...ನಾನು ಯಾರಿಗೂ ಏನೂ ಕೊಟ್ಟಿಲ್ಲ' ಎಂದು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆಯುವ ವೇಳೆ ಮಾಧ್ಯಮಗಳಿಗೆ ಮಾಜಿ ಸಚಿವ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ
ಏನಿದು ಪ್ರಕರಣ ?
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆಮೇಲೆ ನಿಗಮದಲ್ಲಿ 187 ಕೋಟಿ ಹಗರಣ ಆಗಿರೋದು ಬಯಲಾಗಿತ್ತು. ಐಟಿ ಕಂಪನಿಗಳು ಮತ್ತು ಹೈದರಾಬಾದ್ ಮೂಲದ ಸಹಕಾರಿ ಬ್ಯಾಂಕ್ನ ವಿವಿಧ ಖಾತೆಗಳಿಗೆ 88.62 ಕೋಟಿ ಅಕ್ರಮವಾಗಿ ಜಮಾ ಮಾಡಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೂರಿನ ಮೇಲೆ ಸಿಬಿಐ ಮತ್ತು ಇಡಿ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ.
The Enforcement Directorate on Friday took former Minister B Nagendra into custody, as part of a money-laundering probe linked to the alleged irregularities in the Karnataka Maharshi Valmiki Scheduled Tribes Development Corporation Limited, official.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm