ಬ್ರೇಕಿಂಗ್ ನ್ಯೂಸ್
17-07-24 02:04 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.17: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಸದ್ಯ ಇಡಿ ಅಧಿಕಾರಿಗಳ ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.
ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.
ಏನಿದು ಪ್ರಕರಣ? ;
ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.
ಚಂದ್ರಶೇಖರ್ ಬರೆದಿರುವ ಡೆತ್ ನೋಟ್ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.
ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು.
Former minister Nagendra wife Manjula taken into custody by ED officials. A special court for public representatives sent former Congress Minister and MLA B Nagendra to Enforcement Directorate (ED) custody for six days in connection with a multi-crore scam in the Karnataka Maharshi Valmiki Scheduled Tribe Development Corporation Limited (KMVSTDCL)
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm