ಬ್ರೇಕಿಂಗ್ ನ್ಯೂಸ್
18-07-24 12:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ.18: ಪಂಚೆ ತೊಟ್ಟ ರೈತನಿಗೆ ಎಂಟ್ರಿ ನಿರಾಕರಣೆ ಮಾಡಿ ಅವಮಾನ ಮಾಡಿದ ಜಿ.ಟಿ ಮಾಲ್ ನ್ನು 7 ದಿನಗಳ ಕಾಲ ಮುಚ್ಚಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಸದನದಲ್ಲಿ ಜಿ.ಟಿ ಮಾಲ್ ನಲ್ಲಿ ರೈತನಿಗೆ ಅವಮಾನ ಆದ ವಿಚಾರ ಚರ್ಚೆಗೆ ಕಾರಣವಾಯ್ತು. ಜಿಟಿ ಮಾಲ್ ಒಳಗೆ ಪಂಚೆ ಉಟ್ಟ ರೈತನನ್ನ ಬಿಡದೆ ಅವಮಾನಿಸಿದ ವಿಚಾರವಾಗಿ ಸ್ಪೀಕರ್ ಯು.ಟಿ.ಖಾದರ್ ಗರಂ ಆದರು. ಅವನು ಎಷ್ಟೇ ದೊಡ್ಡವನು ಇರಲಿ, ಅವನಿಗೆ ತೋರಿಸಬೇಕು. ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದರು.
ಎಲ್ಲ ಮಾಲ್ ಗಳಿಗೂ ಒಂದೇ ರೂಲ್ಸ್ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ ಎಂದ ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್ ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ ಎಂದು ಆಗ್ರಹಿಸಿದರು.
ಇನ್ನು ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ ಆಗ್ರಹಿಸಿದರು.
ಕಾಂಗ್ರೆಸ್ ಸದಸ್ಯ ಅಶೋಕ್ ಪಟ್ಟಣ ಮಾತನಾಡಿ, ರಾಜ್ಯದ ಎಲ್ಲ ಕ್ಲಬ್ ಗಳು, ಮಾಲ್ ಗಳಲ್ಲಿ ಒಂದೇ ರೂಲ್ಸ್ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುವುದರಿಗೆ ಎಂಟ್ರಿ ಕೊಡಬೇಕು ಎಂದರು.
ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡ್ತಾರೆ, ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡ್ತಾರೆ. ಆದರೆ, ಬೇರೆಯವರಿಗೆ ಆ ರೂಲ್ಸ್ ಇಲ್ವಾ ಎಂದು ಸಚಿವ ಬೈರತಿ ಸುರೇಶ್ ಪ್ರಶ್ನಿಸಿದರು. ಅಲ್ಲದೆ, ಸಚಿವ ಬೈರತಿ ಸುರೇಶ್, 7 ದಿನಗಳ ಕಾಲ ಮಾಲ್ ಮುಚ್ಚಿಸುತ್ತೇವೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರದ ಕ್ರಮ ಕೈಗೊಳ್ಳಬಹುದು ಎಂದರು.
ಏನಿದು ಘಟನೆ?
ಬೆಂಗಳೂರಿನ ಮಾಗಡಿ ಟೋಲ್ ಗೇಟ್ ಬಳಿಯಿರುವ ಜಿಟಿ ಮಾಲ್ ನಲ್ಲಿ ಹಾವೇರಿ ಮೂಲದ ರೈತನೋರ್ವರಿಗೆ ಅಪಮಾನವಾದ ಘಟನೆ ಜುಲೈ 16 ರಂದು ನಡೆದಿದೆ. ವಿಜಯನಗರದ ನಿವಾಸಿ ನಾಗರಾಜ್ ತಂದೆ ಹಾವೇರಿಯವರಾಗಿದ್ದು, ಬೆಂಗಳೂರಿಗೆ ಬಂದಾಗ ಸಿನಿಮಾ ತೋರಿಸಲೆಂದು ಜಿಟಿ ಮಾಲ್ಗೆ ಕರೆದುಕೊಂಡು ಹೋಗಿದ್ದರು. ಸಿನಿಮಾ ಥಿಯೇಟರ್ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ತಪಾಸಣೆ ನಡೆಸುವ ಸೆಕ್ಯುರಿಟಿ ಸಿಬ್ಬಂದಿ, ರೈತ ಪಂಚೆ ಉಟ್ಟಿರುವ ಕಾರಣಕ್ಕೆ ಥಿಯೇಟರ್ ಒಳಗೆ ಬಿಡವುದಿಲ್ಲ. ಇದು ಜಿಟಿ ಮಾಲ್ ನಿಯಮವೆಂದೂ ಹೇಳಿದ್ದಾನೆ. ಎಷ್ಟೇ ಮನವಿ ಮಾಡಿದರೂ ಒಳಗೆ ಬಿಡದಿದ್ದಾಗ, ಬೇಸತ್ತ ನಾಗರಾಜ್ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದಕ್ಕೆ ನೆಟ್ಟಿಗರು ಸೇರಿದಂತೆ, ರಾಜ್ಯದಾದ್ಯಂತ ಮಾಲ್ ಸಿಬ್ಬಂದಿಗಳ ನಡೆಗೆ ಆಕ್ರೋಶ ಹೊರಹಾಕಿದ್ದರು.
Congress minister Byrathi Suresh says will close G T Mall for 7 days for insulting farmer in Bangalore by dening entry into the mall. Byrathi Suresh said have already spoken to the BBMP to take action he added.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm