ಬ್ರೇಕಿಂಗ್ ನ್ಯೂಸ್
23-07-24 09:58 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ.23: ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶವನ್ನು ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ. ಮುಳ್ಳಯ್ಯನಗಿರಿಗೆ ಪ್ರವಾಸಿಗರ ನಿರ್ಬಂಧವನ್ನು ಜುಲೈ 29ರ ತನಕ ನಿಷೇಧಿಸಲಾಗಿದೆ. ಮಳೆಯ ಜೊತೆಗೆ ಹಲವು ಕಡೆ ಗುಡ್ಡ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿಗಳನ್ನು ನಡೆಸಲು ಲೋಕೋಪಯೋಗಿ ಇಲಾಖೆ ಕಾಲಾವಕಾಶವನ್ನು ಕೇಳಿದೆ.
ಜಿಲ್ಲಾಡಳಿತ ತನ್ನ ಪ್ರಕಟಣೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಇನ್ನೂ ಮಳೆ ಬರುತ್ತಿರುವುದರಿಂದ ಹಾಗೂ ದುರಸ್ಥಿ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿ ಹೋಗುವ ರಸ್ತೆಗಳಲ್ಲಿ ದಿನಾಂಕ 31/07/2024ರ ತನಕ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ ಎಂದು ಹೇಳಿದೆ.
ಸ್ಥಳೀಯ ನಿವಾಸಿಗಳ ವಾಹನಗಳು, ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ.
Chikkamagaluru DC orders to close road to Mullayyanagiri hill station.
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm