ಬ್ರೇಕಿಂಗ್ ನ್ಯೂಸ್
03-08-24 11:05 am Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಅನಧಿಕೃತ ಹೋಂ ಸ್ಟೇ, ರೆಸಾರ್ಟ್ಗಳನ್ನು ತೆರವುಗೊಳಿಸಲು ಮುಂದಾಗಿದೆ. ಈ ಸಂಬಂಧ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ 2015ರ ಬಳಿಕ ನಿರ್ಮಾಣ ಆಗಿರುವ ಎಲ್ಲ ಅರಣ್ಯ ಒತ್ತುವರಿ, ರೆಸಾರ್ಟ್, ಹೋಮ್ ಸ್ಟೇಗಳನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ.
ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಅಮಾಯಕರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ. ಈ ರೀತಿಯ ದುರಂತಗಳು ಎಚ್ಚರಿಕೆಯ ಗಂಟೆಯಾಗಿದ್ದು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯದಲ್ಲಿ ಅತಿಕ್ರಮಣದಿಂದಾಗಿ ಭೂಕುಸಿತ ಆಗಿವೆ ಎನ್ನುವ ತಜ್ಞರ ವರದಿಯಿಂದಾಗಿ ಸರ್ಕಾರ ಎಚ್ಚತ್ತುಕೊಂಡಿದೆ.
ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಶಿಖರಗಳಲ್ಲಿ ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಮಣ್ಣು ಹಿಡಿದಿಡುವ ಬೃಹತ್ ಮರಗಳನ್ನು ಕಡಿಯುತ್ತಿರುವುದು, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸುವುದರಿಂದ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ವ್ಯಾಪ್ತಿಯ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಅರಣ್ಯ ಪ್ರದೇಶ ಒತ್ತುವರಿ ಮಾಡಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಹಾಗೂ 1 ತಿಂಗಳೊಳಗೆ ಕೈಗೊಂಡ ಕ್ರಮದ ವರದಿ ಸಲ್ಲಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಈಶ್ವರ ಖಂಡ್ರೆ, ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.
Wayanad landslide, minister eshwar kandhre orders to take out resorts homestay near forest area in karnataka. Any construction after 2015 should be removed he added.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am